ಪಿಯುಸಿ ವಿದ್ಯಾರ್ಥಿನಿ ನಾಪತ್ತೆ
ಮೈಸೂರು: ಇಲ್ಲಿನ ಚಾಮುಂಡಿಬೆಟ್ಟಕ್ಕೆ ಬಂದಿದ್ದ ಜೆ.ಆರ್. ದಶವಂತ್ರಾವ್ ಎಂಬವರ ಪುತ್ರಿ ಡಿ.ಎಲ್. ಪೂಜಾ ಜಾದವ್ (17) ಜ.1ರಂದು ನಾಪತ್ತೆಯಾಗಿದ್ದಾರೆ. ಪೂಜಾ ಬೆಂಗಳೂರಿನ ಎಸ್ಎಂಆರ್ವಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದು, ಅಲ್ಲಿ ಶಿವು ಎಂಬಾತನ ಜೊತೆ ಸಲಿಗೆಯಿಂದ ಇರುತ್ತಿದ್ದಳು. ಇದರಿಂದ ಅವಳ ಓದು ನಿಲ್ಲಿಸಿ ಮೈಸೂರಿನ ಸಿದ್ಧಾರ್ಥ ನಗರದ ನನ್ನ ಹೆತ್ತವರ ಮನೆಯಲ್ಲಿ ಕಳೆದ 1 ತಿಂಗಳಿಂದ ಬಿಟ್ಟಿದ್ದೆ. ನನ್ನ ತಂಗಿಯ ಮಗಳಾದ ಸಂಜನ ಜೊತೆ ಪೂಜಾ ಹೊಸ ವರ್ಷದಂದು ಚಾಮುಂಡಿಬೆಟ್ಟಕ್ಕೆ ಹೋಗಿದ್ದ ವೇಳೆ ಪೂಜಾ ನಾಪತ್ತೆಯಾಗಿದ್ದಾಳೆ ಎಂದು ದಶವಂತ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಚಹರೆ: 4.8 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ತೆಳ್ಳನೆ ಶರೀರ, ಕನ್ನಡ, ಇಂಗ್ಲಿಷ್ ಮತ್ತು ಮರಾಠಿ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ದೂ. 0821-2418319, 519 ಸಂಪರ್ಕಿಸಲು ಕೆ.ಆರ್. ಠಾಣೆ ಪೊಲೀಸರು ಕೋರಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.