ಪೌರ ಕಾರ್ಮಿಕರ ಬೇಡಿಕೆ ಈಡೇರಿಕೆ
ಮೈಸೂರು: ಪೌರ ಕಾರ್ಮಿಕರ ಕೆಲವು ಬೇಡಿಕೆ ಈಡೇರಿಸಿರುವ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಅಖಿಲ ಕರ್ನಾಟಕ ಡಾ. ಬಿ.ಆರ್. ಅಂಬೇಡ್ಕರ್ ಆದಿ ದ್ರಾವಿಡ ಪೌರ ಕಾರ್ಮಿಕರ ಜನಾಂಗದ ಅಭಿವೃದ್ಧಿ ಟ್ರಸ್ಟ್ ಅಭಿನಂದನೆ ಸಲ್ಲಿಸಿದೆ. ಪೌರ ಕಾರ್ಮಿಕರ 9 ಬೇಡಿಕೆಗಳ ಪೈಕಿ ಮೈಸೂರು ಮಹಾನಗರ ಪಾಲಿಕೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ 1800 ಮಂದಿಗೆ ಕನಿಷ್ಠ ವೇತನ, ಇಎಸ್ಐ, ಆರೋಗ್ಯ ವಿಮೆ, ವಿವಿಧ ಸವಲತ್ತು ನೀಡದೆ ಆಗಿರುವ ಅನ್ಯಾಯದ ಬಗ್ಗೆ ಸಿಐಡಿ ತನಿಖೆ ನಡೆಸುತ್ತಿರುವುದು, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗ ರಚನೆಗೆ ಮುಂದಾಗಿರುವುದು, ನಗರದಲ್ಲಿ ಆದಿದ್ರಾವಿಡ ಪೌರಕಾರ್ಮಿಕರ ಸಮುದಾಯ ಭವನ ನಿರ್ಮಿಸಲು 1 ಕೋಟಿ ಹಣ ಮಂಜೂರಾತಿಗೆ ಆದೇಶ ನೀಡಿರುವುದು ಮತ್ತು ಸ್ಯಾನಿಟರಿ ಇನ್ಸ್ಪೆಕ್ಟರ್ ತರಬೇತಿ ಪಡೆದ ಪೌರಕಾರ್ಮಿಕ ಮಕ್ಕಳನ್ನು ನೇರ ನೇಮಕಾತಿ ನಡೆಯುವವರೆಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ತೀರ್ಮಾನಿಸಿರುವುದು ಸ್ವಾಗತಾರ್ಹ ಎಂದು ಸಂಘದ ಅಧ್ಯಕ್ಷ ವಿ.ರಾಜು ತಿಳಿಸಿದ್ದಾರೆ. ಅಂತೆಯೇ ರಾಜ್ಯ ಸರ್ಕಾರ ಉಳಿದ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಮನವಿ ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.