ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ವಾರ್ಷಿಕೋತ್ಸವ

Parashurama
Updated On : 28 Jan 2013, 12:07 pm

ಶ್ರೀನಟರಾಜ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವ ಜ.29ರಿಂದ ಫೆ. 2ರವರೆಗೆ ಶ್ರೀ ಚಿದಾನಂದ ಸ್ವಾಮಿಗಳ ಸಾನ್ನಿಧ್ಯದಲ್ಲಿ ನಡೆಯಲಿದೆ.
ನಾಳೆ ಸಮಾರೋಪ
ಮೈಸೂರು:  ಮೈಸೂರು ವಿವಿ ಅಂತರ ಕಾಲೇಜು ಚಾಮುಂಡಿ ವಲಯ ಮಹಿಳೆಯರ ಬ್ಯಾಡ್ಮಿಂಟನ್, ಬಾಲ್ ಬ್ಯಾಡ್ಮಿಂಟನ್, ಕಬಡ್ಡಿ, ಟೆನಿಕಾಯ್ಟ್, ಥ್ರೋಬಾಲ್ ಮತ್ತು ವಾಲಿಬಾಲ್ ಪಂದ್ಯಾವಳಿಯ ಮುಕ್ತಾಯ ಸಮಾರಂಭವು ಜ.29ರಂದು ಮಧ್ಯಾಹ್ನ 1.30ಕ್ಕೆ ವಿಜಯನಗರ ಮಹಿಳಾ ಕಾಲೇಜು ಆವರಣದಲ್ಲಿ ನಡೆಯಲಿದೆ.
ಮಹಿಳಾ ಸಮ್ಮೇಳನ
ಅಖಿಲ ಭಾರತ ಮಹಿಳಾ ಸಮ್ಮೇಳನವು ಜ.29 ರಿಂದ 31 ರವರೆಗೆ ಕೇರಳದ ತಿರುವನಂತಪುರಂನಲ್ಲಿ ನಡೆಯಲಿದೆ. ಸಮ್ಮೇಳನವನ್ನು ಸುಪ್ರೀಂಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ ಉದ್ಘಾಟಿಸುವರು ಎಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷೆ ಜಿ.ಎಸ್. ಸೀಮಾ ತಿಳಿಸಿದ್ದಾರೆ.
ಗಣರಾಜ್ಯೋತ್ಸವ
ಸಹ ಜೀವನ ಕ್ಷೇಮಾಭಿವೃದ್ಧಿ ಸಂಘವು ಸಂವಿಧಾನ ದಿನಾಚರಣೆ ಅಂಗವಾಗಿ ಜ.26ರ ಸಂಜೆ 5ಕ್ಕೆ ಕುವೆಂಪುನಗರದ ರಮಾಬಾಯಿ ಅಂಬೇಡ್ಕರ್ ವಿದ್ಯಾ ಸಂಸ್ಥೆಯಲ್ಲಿ ಪತ್ರಕರ್ತ ಶಿವಸುಂದರ್ ಅವರಿಂದ ಡಾ.ಅಂಬೇಡ್ಕರ್ ಕನಸು ಮತ್ತು ಭಾರತದ ಸಂವಿಧಾನ ಎಂಬ ವಿಷಯ ಕುರಿತು ಉಪನ್ಯಾಸ ಏರ್ಪಡಿಸಿದೆ. ನಿವೃತ್ತ ಡಿಡಿಪಿಯು ಎನ್.ಪುಟ್ಟನಂಜಯ್ಯ ಅಧ್ಯಕ್ಷತೆ ವಹಿಸುವರು. ಗಣರಾಜ್ಯೋತ್ಸವ ಅಂಗವಾಗಿ ನಗರ ಜೆಡಿಎಸ್ ಕಚೇರಿಯಲ್ಲಿ ಜ.26ರ ಬೆಳಗ್ಗೆ 10.30ಕ್ಕೆ ಧ್ವಜಾರೋಹಣ ನೆರವೇರಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ಶಾಸಕರು, ಪಾಲಿಕೆ ಸದಸ್ಯರು,  ಮುಖಂಡರು ಮತ್ತು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪಕ್ಷದ ನಗರ ಅಧ್ಯಕ್ಷ ರಾಜಣ್ಣ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments