ಫೆ.9ಕ್ಕೆ ಬೃಹತ್ ಉದ್ಯೋಗ ಮೇಳ
ಮೈಸೂರು: ಶ್ರೀ ಚಂದ್ರಮೌಳೇಶ್ವರಸ್ವಾಮಿ ದೇವಸ್ಥಾನ ಟ್ರಸ್ಟ್ ಹಾಗೂ ವಿವಿಧ ಕಂಪನಿಗಳ ಸಹಯೋಗದೊಂದಿಗೆ ಫೆ. 9 ರಂದು ಕೆ.ಜಿ. ಕೊಪ್ಪಲಿನ ಚಂದ್ರಮೌಳೇಶ್ವರ ಆವರಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 10ಕ್ಕೆ ನಡೆಯುವ ಮೇಳದಲ್ಲಿ 8- 9ನೇ ತರಗತಿ, ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಜೆಒಸಿ, ಡಿಪ್ಲೊಮಾ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿಬಿಎಂ, ಬಿ.ಇ ಹಾಗೂ ಇನ್ನಿತರ ಎಲ್ಲಾ ಪದವೀಧರರು ಭಾಗವಹಿಸಬಹುದು. ಬಂದವರಿಗೆ ಮಧ್ಯಾಹ್ನದ ಭೋಜನ ವ್ಯವಸ್ಥೆ ಮಾಡಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಕೆ. ಹರೀಶ್ಗೌಡ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಬಿಪಿಓ, ರೀಟೈಲ್, ಮ್ಯಾನುಫಾಕ್ಚರಿಂಗ್, ಬ್ಯಾಂಕಿಂಗ್, ಆಟೋಮೊಬೈಲ್, ಟ್ರೈನಿಂಗ್ ಅಂಡ್ ಪ್ಲೇಸ್ಮೆಂಟ್ ಸೆಕ್ಟರ್ಗಳಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಬೃಹತ್ ಸಂಸ್ಥೆಗಳಾದ ಎಲ್ ಅಂಡ್ ಟಿ, ಫಾಲ್ಕನ್ ಕಾರ್ಖಾನೆಗಳು, ಐಸಿಐಸಿಐ, ಎಚ್ಡಿಎಫ್ಸಿ ಬ್ಯಾಂಕ್ಗಳು ಭಾಗವಹಿಸಲಿವೆ ಎಂದರು. ಮೊ. 99646 26811, 94488 12345, 97415 27777 ಸಂಪರ್ಕಿಸಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.