ಬೈಕ್ಗಳ ಡಿಕ್ಕಿ: ಒಬ್ಬ ಸಾವು
ಮೈಸೂರು: ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಮೃತಪಟ್ಟಿರುವ ಘಟನೆ ಸಯ್ಯಾಜಿರಾವ್ ರಸ್ತೆಯಲ್ಲಿರುವ ಆರ್ಎಂಸಿ ವೃತ್ತದ ಬಳಿ ನಡೆದಿದೆ. ಪಾಂಡಿಚೇರಿ ಮೂಲದ ಸತೀಶ್ (42) ಮೃತಪಟ್ಟವರು. ಇವರು ಮೈಸೂರಿನ ಫಾಲ್ಕನ್ ಟೈರ್ಸ್ನಲ್ಲಿ ಕೆಲಸ ಮಾಡಿಕೊಂಡಿದ್ದು, ಹೆಬ್ಬಾಳಿನಲ್ಲಿ ವಾಸವಾಗಿದ್ದರು. ಅತಿಥಿಯೊಬ್ಬರನ್ನು ಗ್ರಾಮಾಂತರ ಬಸ್ ನಿಲ್ದಾಣಕ್ಕೆ ತನ್ನ ಬೈಕಿನಲ್ಲಿ ಭಾನುವಾರ ಮಧ್ಯರಾತ್ರಿ ಬಿಟ್ಟು, ವಾಪಸ್ ಮನೆಗೆ ತೆರಳುತ್ತಿದ್ದಾಗ ಆರ್ಎಂಸಿ ವೃತ್ತದ ಬಳಿ ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಮತ್ತೊಂದು ಬೈಕ್ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸತೀಶ್ ಸೋಮವಾರ ಮುಂಜಾನೆ ಮೃತಪಟ್ಟಿದ್ದಾರೆ. ಮತ್ತೊಬ್ಬ ಬೈಕ್ ಸವಾರ ಮನೋಜ್ ಎಂಬವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಈ ಸಂಬಂಧ ಎನ್.ಆರ್. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.