ಫೆ.6ಕ್ಕೆ ಮೈಸೂರಿಗೆ ಮಾಜಿ ಸಿಎಂ ಕುಮಾರಸ್ವಾಮಿ
ಮೈಸೂರು: ಎಸಿಪಿ ಹುದ್ದೆಗೆ ರಾಜಿನಾಮೆ ನೀಡಿದ ಚೆಲುವರಾಜ್ ಅವರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದು, ಈ ಸಂಬಂಧ ಫೆ.6ರಂದು ಟಿ.ನರಸೀಪುರ- ನಂಜನಗೂಡು ರಸ್ತೆಯ ಎಪಿಎಂಸಿ ಯಾರ್ಡ್ನಲ್ಲಿ ಪಕ್ಷದ ಸಮಾವೇಶ ಏರ್ಪಡಿಸಲು ನಿರ್ಧರಿಸಲಾಗಿದೆ.
ಮಂಗಳವಾರ ಪಕ್ಷದ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಎಸ್.ಚಿಕ್ಕಮಾದು ಅವರ ನೇತೃತ್ವದಲ್ಲಿ ನಡೆದ ವರುಣಾ ವಿಧಾನಸಭಾ ಕ್ಷೇತ್ರದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಅಂದು ಬೆಳಗ್ಗೆ 11ಕ್ಕೆ ಸಮಾವೇಶವನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಉದ್ಘಾಟಿಸಲಿದ್ದು, ಅವರ ಸಮ್ಮುಖದಲ್ಲಿ ಚೆಲುವರಾಜ್ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಳ್ಳುವರು ಎಂದರು.
ರಾಜ್ಯ ನಾಯಕರಾದ ಬಂಡೆಪ್ಪ ಕಾಶಂಪೂರ್, ಪಿಜಿಆರ್ ಸಿಂಧ್ಯಾ, ಎಚ್.ಸಿ. ನೀರಾವರಿ, ಜಮೀರ್ ಅಹಮ್ಮದ್ ಖಾನ್, ಡಾ. ಅನ್ನದಾನಿ, ಅನಂತಯ್ಯ ಭಾಗವಹಿಸುವರು. ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಚಿಹ್ನೆಯಡಿ ಸ್ಪರ್ಧಿಸಲು ಇದುವರೆವಿಗೂ ಯಾರು ಅರ್ಜಿ ಸಲ್ಲಿಸಿಲ್ಲ. ಆದ್ದರಿಂದ ಚೆಲುವರಾಜ್ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.