ಮಕ್ಕಳಿಂದ ಕಡ್ಡಾಯ ಶಿಕ್ಷಣ ಜಾಗೃತಿ ಜಾಥಾ
ಮೈಸೂರು: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳು ಸಂಯುಕ್ತವಾಗಿ ಮಂಗಳವಾರ ಆಯೋಜಿಸಿದ್ದ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಾಗೂ ಮಕ್ಕಳ ಹಕ್ಕುಗಳ ಜಾಗೃತಿ ಜಾಥಾದಲ್ಲಿ ವಿವಿಧ ಶಾಲೆಯ ನೂರಾರು ಮಕ್ಕಳು ಪಾಲ್ಗೊಂಡಿದ್ದರು.
ಕಾಡಾ ಕಚೇರಿ ಆವರಣದಲ್ಲಿ ಜಾಥಾಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಮೋಹನ್ ಶ್ರೀಪಾದ್ ಸಂಕೊಳ್ಳಿ ಚಾಲನೆ ನೀಡಿದರು. ನಂತರ ಮಾತನಾಡಿದ ನ್ಯಾಯಾಧೀಶರು, ಇತ್ತೀಚೆಗೆ ಮಕ್ಕಳ ಮೇಲೆ ದೌರ್ಜನ್ಯ, ಅತ್ಯಾಚಾರ ಹೆಚ್ಚಾಗುತ್ತಿದೆ. ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸಬೇಕು. ಇದನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಮಕ್ಕಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುವ ಪೋಷಕರು ಮತ್ತು ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಅವರು ಸಲಹೆ ನೀಡಿದರು.
ಪ್ರಧಾನ ಸಿನಿಲ್ ನ್ಯಾಯಾಧೀಶ (ಹಿರಿಯ ಶ್ರೇಣಿ) ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿ ಬಿ. ನಂದಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎನ್.ಆರ್. ವಿಜಯ್ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.