ಮೇಲೂರು ಗ್ರಾಪಂ ಅಧ್ಯಕ್ಷರ ಚುನಾವಣೆಗೆ ಹೈ ತಡೆ
ಕೆ.ಆರ್.ನಗರ: ತಾಲೂಕಿನ ಮೇಲೂರು ಗ್ರಾಪಂ 2ನೇ ಅವಧಿಯ ಅಧ್ಯಕ್ಷ ಸ್ಥಾನದ ಆಯ್ಕೆಯ ಚುನಾವಣಾ ನಡಾವಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಡಿ.21, 2012ರಂದು ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 4 ಮಂದಿ ಸದಸ್ಯರು ಹಾಜರಿದ್ದು, ಈ ಸಂದರ್ಭ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ಗೋವಿಂದೇಗೌಡ ನಾಮಪತ್ರ ಸಲ್ಲಿಸಿದ್ದರು. 14 ಸದಸ್ಯ ಬಲದ ಪಂಚಾಯಿತಿಯಲ್ಲಿ 4 ಮಂದಿ ಹಾಜರಿದ್ದರಿಂದ ಚುನಾವಣೆ ಮುಂದೂಡಲಾಗಿತ್ತು. ನಂತರ ಡಿ.27, 2012ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ರಾಮೇಗೌಡ ಆಯ್ಕೆಯಾಗಿದ್ದರು. ಇದನ್ನು ಪ್ರಶ್ನಿಸಿ ಗೋವಿಂದೇಗೌಡ ಹೈಕೋರ್ಟ್ಗೆ ದಾವೆ ಸಲ್ಲಿಸಿ ಡಿ.21, 2012 ರಂದು ನಾಮಪತ್ರ ಸಲ್ಲಿಸಿರುವ ತಮ್ಮನ್ನು ಮುಂದುವರಿದ ಅಧ್ಯಕ್ಷ ಸ್ಥಾನದ ಆಯ್ಕೆ ಸಭೆಯಲ್ಲಿ ಆಯ್ಕೆ ಮಾಡಿಲ್ಲ ಎಂದು ತಡೆಯಾಜ್ಞೆ ಕೋರಿದ್ದರು.
ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ತಡೆಯಾಜ್ಞೆ ನೀಡಿ ಮೇಲೂರು ಗ್ರಾಪಂ ಆಯ್ಕೆಯಾಗಿರುವ ರಾಮೇಗೌಡ ಮುಂದಿನ ಆದೇಶದವರೆಗೆ ಯಾವುದೆ ಸಭೆ ನಡೆಸದಂತೆ ಹಾಗೂ ಗ್ರಾಪಂ ಕೆಲಸ ಕಾರ್ಯಗಳನ್ನು ನಿರ್ವಹಿಸದಂತೆ ಮತ್ತು ಅಧಿಕಾರ ಚಲಾಯಿಸಿ ಅಧ್ಯಕ್ಷರ ಸ್ಥಾನದಲ್ಲಿ ಕುಳಿತುಕೊಳ್ಳದಂತೆ ಸೂಚನೆ ನೀಡಿದೆ.
ಉಪಾಧ್ಯಕ್ಷರಿಗೆ ಅಧಿಕಾರ: ಅಧ್ಯಕ್ಷರ ಆಯ್ಕೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಉಪಾಧ್ಯಕ್ಷರು ಅಧ್ಯಕ್ಷರ ಕಾರ್ಯನಿರ್ವಹಿಸುವಂತೆ ತಾಪಂ ಕಾರ್ಯನಿರ್ವಹಣಾಧಿಕಾರಿ ಕಚೇರಿಯ ಆದೇಶ ಪತ್ರದಲ್ಲಿ ತಸೂಚಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.