ಮುಖ್ಯ ಶಿಕ್ಷಕರ ಬೇಡಿಕೆ ಈಡೇರಿಕೆ: ಸಚಿವರ ಭರವಸೆ
ಮೈಸೂರು: ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಧ್ಯಾಯರ ಸಂಘದ ಬೇಡಿಕೆ ಈಡೇರಿಸುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಭರವಸೆ ನೀಡಿದ್ದಾರೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ. ಚಂದ್ರಮೋಹನ್ ತಿಳಿಸಿದ್ದಾರೆ. ರಾಜ್ಯ ಸಂಘದ ಅಧ್ಯಕ್ಷರ ನೇತೃತ್ವದಲ್ಲಿ ಭೇಟಿ ಮಾಡಿದಾಗ ಸಚಿವರು ಈ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ. ಈ ತಿಂಗಳು ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಸಂಘದ ಧ್ಯೇಯೋದ್ದೇಶಗಳಿಗೆ ಸ್ಪಂದಿಸುವವರನ್ನು ಬೆಂಬಲಿಸಲು ಜಿಲ್ಲಾಧ್ಯಕ್ಷ ಜೆ. ಜವರೇಗೌಡರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿಯ ಸಭೆ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. ಈಗಾಗಲೇ ನೀಡಿರುವ ಬೇಡಿಕೆಗಳ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸುವಂತೆ ಡಿಡಿಪಿಐ ಅವರನ್ನು ಕೋರಲು ಸಭೆ ನಿರ್ಧರಿಸಿದೆ.