ಪಿಯು ಪೂರಕ ಪರೀಕ್ಷಾ ಕೇಂದ್ರಗಳ ಸುತ್ತ್ತ ನಿಷೇಧಾಜ್ಞೆ
ಕ.ಪ್ರ.ವಾರ್ತೆ , ಮೈಸೂರು , ಜು. 2
ನಗರದ 7 ಕೇಂದ್ರಗಳಲ್ಲಿ ಜು.3 ರಿಂದ 12 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪರೀಕ್ಷೆ ಸುಗಮವಾಗಿ ನಡೆಸಲು ಪರೀಕ್ಷೆ ನಡೆಯುವ ದಿನಗಳಂದು ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಪರೀಕ್ಷಾ ಕೇಂದ್ರಗಳ ಬಳಿ 200 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ ನಿಷೇಧಿತ ಪ್ರದೇಶವೆಂದು ನಗರ ಪೊಲೀಸ್ ಆಯುಕ್ತ ಕೆ.ಎಲ್. ಸುಧೀರ್ ಘೋಷಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಬಳಿಯಿರುವ ಜೆರಾಕ್ಸ್ ಹಾಗೂ ಲೇಖನ ಸಾಮಗ್ರಿ ಅಂಗಡಿಗಳನ್ನು ಮುಚ್ಚಬೇಕು. ಈ ಪ್ರದೇಶಗಳಲ್ಲಿ ಪರೀಕ್ಷಾರ್ಥಿಗಳು ಮತ್ತು ಪರೀಕ್ಷಾ ಸಿಬ್ಬಂದಿ ಹೊರತುಪಡಿಸಿ ಅನಧಿಕೃತ ವ್ಯಕ್ತಿಗಳು ಸಂಚರಿಸಬಾರದು. ಯಾರೂ ಆಕ್ಷೇಪಾರ್ಹ ವಸ್ತುಗಳನ್ನು ಒಯ್ಯಬಾರದು ಎಂದು ಅವರು ತಿಳಿಸಿದ್ದಾರೆ.