ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ನಾಳೆ 2ನೇ ತಾ.ಕಸಾಪ ಸಮ್ಮೇಳನ

Srinivasa Murthy VN
Updated On : 4 Jul 2013, 11:31 am

ಕ.ಪ್ರ.ವಾರ್ತೆ ಎಚ್.ಡಿ.ಕೋಟೆ ಜು. 4
ತಾಲೂಕಿನ 2ನೇ ಕನ್ನಡ ಸಾಹಿತ್ಯ ಸಮ್ಮೇಳವು ಜು. 6 ರಂದು ಇಲ್ಲಿನ ಜೆಎಸ್‌ಎಸ್ ಮಂಗಳ ಮಂಟಪದಲ್ಲಿ ಅದ್ಧೂರಿಯಾಗಿ ಜರುಗಲಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಎಸ್ ಚಿಕ್ಕಮಾದು ಹೇಳಿದರು.
ಪಂಡಿತ್ ನಾಗರಾಜಯ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸುವರು. ಅಂದು ಬೆಳಗ್ಗೆ 8ಕ್ಕೆ ಶಾಸಕ ಎಸ್. ಚಿಕ್ಕಮಾದು ರಾಷ್ಟ್ರಧ್ವಜ, ತಹಸೀಲ್ದಾರ್ ಕೃಷ್ಣ ನಾಡಧ್ವಜ ಹಾಗೂ ತಾಲೂಕು ಅಧ್ಯಕ್ಷ ಮಹೇಶ್ ಪರಿಷತ್ ಧ್ವಜಾರೋಹಣ ಮಾಡುವರು. ಇದಾದ ಬಳಿಕ ಪೂರ್ಣಕುಂಭ ಹಾಗೂ ವಿವಿಧ ಜಾನಪದ ಕಲಾತಂಡಗಳೊಂದಿಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ.
ಮೆರವಣಿಗೆಯು ಹುಣಸೂರು ಬೇಗೂರು ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಿಂದ ಹೊರಟು ಜೆಎಸ್‌ಎಸ್ ಮಂಗಳ ಮಂಟಪದಲ್ಲಿ ಕೊನೆಗೊಳ್ಳಲಿದೆ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ತಾಪಂ ಅಧ್ಯಕ್ಷೆ ಲಕ್ಷ್ಮೀ ರಮೇಶ್ ಮೆರವಣಿಗೆ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸರಗೂರು ಪಪಂ ಅಧ್ಯಕ್ಷೆ ಪದ್ಮಾ ಶ್ರೀನಿವಾಸ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಶ್ರೀಕಂಠಯ್ಯ, ತಾಪಂ ಇಒ ಲಿಂಗರಾಜು, ತಾಲೂಕು ಕನ್ನಡಪರ ಸಂಘಟನೆಗಳ ಅಧ್ಯಕ್ಷ ಪದಾಧಿಕಾರಿಗಳು, ಎಲ್ಲ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರು ಭಾಗವಹಿಸುವರು.
ಬೆಳಗ್ಗೆ 10.30ಕ್ಕೆ ವೇದಿಕೆಯ ಕಾರ್ಯಕ್ರಮ ಜರುಗಲಿದೆ. ಶಾಸಕ ಎಸ್. ಚಿಕ್ಕಮಾದು ಸ್ವಾಗತಿಸುವರು. ಜಿಲ್ಲಾ ಕಸಾಪ ಅಧ್ಯಕ್ಷ ಚಂದ್ರಶೇಖರ್ ಪ್ರಾಸ್ತಾವಿಕೆ ಭಾಷಣ ಮಾಡುವರು.
ಪತ್ರಿಕೋದ್ಯಮಿ ರಾಜಶೇಖರ ಕೋಟಿ ಉದ್ಘಾಟಿಸುವರು. ಕವಿಯಿತ್ರಿ ಲತಾ ರಾಜಶೇಖರ್ ಅಧ್ಯಕ್ಷತೆ ವಹಿಸುವರು. ಸಮ್ಮೇಳನಾಧ್ಯಕ್ಷ ಪಂಡಿತ ನಾಗರಾಜಯ್ಯ ಮಾತನಾಡುವರು. ತಾಲೂಕು ಮಾಜಿ ಶಾಸಕರು, ಸಚಿವರು, ಜಿಪಂ ಸದಸ್ಯರು, ತಾಪಂ ಸದಸ್ಯರು ಭಾಗವಹಿಸುವರು. ನಂತರ ಮಧ್ಯಾಹ್ನ 2ಕ್ಕೆ ಕವಿಗೋಷ್ಠಿ, ಮಧ್ಯಾಹ್ನ 3ಕ್ಕೆ 2 ಹಾಗೂ 3ನೇ ಗೋಷ್ಠಿಯು ಜರುಗಲಿದೆ.
ಸಂಜೆ ಸಮಾರೋಪ ಸಮಾರಂಭವು ನಡೆಯಲಿದ್ದು, ತಾಲೂಕಿನ ಎಲ್ಲ ಸಂಘ ಸಂಸ್ಥೆಯ ಪದಾಧಿಕಾರಿಗಳು, ತಾಲೂಕಿನ ಸಾರ್ವಜನಿಕರು, ಕನ್ನಡಪರ ಸಂಘಟನೆಯವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಚಿಕ್ಕಮಾದು  ಮನವಿ ಮಾಡಿದರು.
ತಾಲೂಕು ಕಸಾಪ ಅಧ್ಯಕ್ಷ ಮಹೇಶ್, ಸುರೇಂದ್ರ, ನಾರಾಯಣಗೌಡ, ಚಾ. ನಂಜುಂಡಮೂರ್ತಿ, ಬಸವರಾಜು, ತಾಲೂಕು ನೌಕರರ ಸಂಘದ ಅಧ್ಯಕ್ಷ ಶ್ರೀಕಂಠಯ್ಯ ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement