ಡಾ. ಬಾಬು ಜಗಜೀವನರಾಂಗೆ ಜಿಲ್ಲಾಡಳಿತ ಗೌರವ
ಕ.ಪ್ರ.ವಾರ್ತೆ , ಮೈಸೂರು , ಜು. 6
ಹಸಿರು ಕ್ರಾಂತಿಯ ಹರಿಕಾರ ಹಾಗೂ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀನರಾಂ ಅವರ 27ನೇ ಪರಿನಿರ್ವಾಣ ದಿನದ ಅಂಗವಾಗಿ ಅವರ ಪತ್ರಿಮೆಗೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸ ಪ್ರಸಾದ್ ಶನಿವಾರ ಮಾಲಾರ್ಪಣೆ ಮಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮೈಸೂರು ಮಹಾನಗರ ಪಾಲಿಕೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಜಿಪಂ ಅಧ್ಯಕ್ಷ ಕಾ.ಪು. ಸಿದ್ದವೀರಪ್ಪ, ರಾಷ್ಟ್ರೀಯ ಎಸ್ಸಿ ಮತ್ತು ಎಸ್ಟಿ ಆಯೋಗದ ಸದಸ್ಯರಾದ ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಸಂಸದ ಎಚ್. ವಿಶ್ವನಾಥ್, ಶಾಸಕರಾದ ವಾಸು, ಎಂ.ಕೆ. ಸೋಮಶೇಖರ್, ವಿಧಾನ ಪರಿಷತ್ ಮಾಜಿ ಸದಸ್ಯ ಸಿ. ರಮೇಶ್, ಒಣಭೂಮಿ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಕೆ.ಆರ್. ಮೋಹನ್ ಕುಮಾರ್ ಗೌರವ ಸಲ್ಲಿಸಿದರು.
ಪೊಲೀಸ್ ಆಯುಕ್ತ ಎಂ.ಎ. ಸಲೀಂ, ಜಿ.ಪಂ. ಸಿಇಒ ಪಿ.ಎ. ಗೋಪಾಲ್, ಹೆಚ್ಚುವರಿ ಜಿಲ್ಲಾಧಿಕಾರಿ ನಾಗಾನಾಯಕ್, ನಗರ ಪಾಲಿಕೆ ಆಯುಕ್ತ ಪಿ.ಜೆ. ರಮೇಶ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಾಜೇಶ್ ವಿ. ಗೌಡ, ನಗರ ಪಾಲಿಕೆ ಮಾಜಿ ಸದಸ್ಯ ಸುನಂದಕುಮಾರ್, ಕಾಂಗ್ರೆಸ್ ಡಿಸಿಸಿ ಸದಸ್ಯ ಚಂದ್ರು ಇದ್ದರು.
ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಮೆಗೆ ಮಾಲಾರ್ಪಣೆ
ಮೈಸೂರು: ನಗರ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಡಾ. ಬಾಬು ಜಗಜೀವನರಾಂ ಅವರ 27ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಕಾರ್ಯಕರ್ತರು ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಸಮಿತಿ ಉಪಾಧ್ಯಕ್ಷರಾದ ಕಾಳಯ್ಯ, ಬಿ. ಪ್ರಸಾದ್, ಸಾಹುಕಾರ್ ಚೆನ್ನಯ್ಯ ಬ್ಲಾಕ್ ಉಪಾಧ್ಯಕ್ಷೆ ವೆಂಕಟಮ್ಮ, ಸಂಚಾಲಕ ಸುಭಾಷ್, ರಾಘವೇಂದ್ರ, ಮಾಣಿಕ್ಯ, ತ.ಪಾ. ರಾಮಚಂದ್ರ, ದೀಪಕ್. ಚಂದನ್, ಎಂ. ರಘು ಇದ್ದರು.