ಅತಿಥಿ ಉಪನ್ಯಾಸಕರಿಗೆ ಗೌರವಧನ: ಅಭಿನಂದನೆ
ಮೈಸೂರು: ಕಳೆದ 2012- 13ನೇ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದ ಎಲ್ಲಾ ಅತಿಥಿ ಉಪನ್ಯಾಸಕರಿಗೆ ಗೌರವಧನ ಪಾವತಿಸಲು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರ ಆದೇಶದ ಮೇರೆಗೆ ಪ್ರಾದೇಶಿಕ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ ಎಂದು ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಂಘದ ಅಧ್ಯಕ್ಷ ಕೆ. ಪ್ರದೀಪ್‌ಕುಮಾರ್ ತಿಳಿಸಿದ್ದಾರೆ. ಸಾವಿರಾರು ಅತಿಥಿ ಉಪನ್ಯಾಸಕರಿಗೆ ಅನುಮೋದನೆ, ಗೌರವಧನ ನೀಡಿರಲಿಲ್ಲ. ಈ ಸಂಬಂಧ 6 ತಿಂಗಳಿಂದ ಸಂಘದ ವತಿಯಿಂದ ನಿರಂತರವಾಗಿ ಹೋರಾಟ ನಡೆಸಲಾಗಿತ್ತು. ಈಗ ಎಲ್ಲರಿಗೂ ಗೌರವಧನ ಸಿಕ್ಕಿದೆ. ಹೀಗಾಗಿ ನಮ್ಮ ಸಮಸ್ಯೆಗೆ ಸ್ಪಂದಿಸಿರುವ ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ, ಕಾಲೇಜು ಶಿಕ್ಷಣ ಆಯುಕ್ತರು, ಮೈಸೂರು ಪ್ರಾದೇಶಿಕ ಜಂಟಿ ನಿರ್ದೇಶಕರು, ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಶಾಸಕ ವಾಸು, ಮಾಜಿ ಶಾಸಕರಾದ ಎಚ್.ಎಸ್. ಶಂಕರಲಿಂಗೇಗೌಡ, ಕೆ.ಟಿ. ಶ್ರೀಕಂಠೇಗೌಡ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದ್ದಾರೆ.