ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಕಾನೂನು ಸುವ್ಯವಸ್ಥೆಗೆ ಆದ್ಯತೆ ನೀಡಲು ಸೂಚನೆ

Vishwanath S
Updated On : 8 Jul 2013, 12:10 pm

ಕ.ಪ್ರ.ವಾರ್ತೆ , ಮೈಸೂರು , ಜು. 7
ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಲಾಲ್ ರುಖುಮಾ ಪಚಾವೋ ಅವರು ಭಾನುವಾರ ನಗರ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು.
ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಸಂಚಾರ ಹಾಗೂ ಅಪರಾಧ ನಿಯಂತ್ರಣಕ್ಕೆ ಒತ್ತು ನೀಡುವಂತೆ ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ಪಚಾವೋ ಸೂಚಿಸಿದರು. ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ ಅವರು, ನಗರದ ಈಗಿನ ಕಾನೂನು ಮತ್ತು ಸುವ್ಯವಸ್ಥೆ, ಸಂಚಾರ, ಅಪರಾಧ ಪರಿಸ್ಥಿತಿ ವಿವರಿಸಿದರು. ಜೊತೆಗೆ ನಗರದ ವ್ಯಾಪ್ತಿ ಬೆಳೆದಿದ್ದು, ಹೊಸ ಸಂಚಾರ ಮತ್ತು ಸಾಮಾನ್ಯ ಪೊಲೀಸ್ ಠಾಣೆ ತೆರೆಯುವ ವಿಚಾರವನ್ನು ಅಧಿಕಾರಿಗಳ ಗಮನಕ್ಕೆ ತಂದರು.
ಈ ಸಭೆಯಲ್ಲಿ ಇನ್ಸ್‌ಪೆಕ್ಟರ್ ನಂತರ ಅಧಿಕಾರಿಗಳು ಪಾಲ್ಗೊಂಡಿದ್ದರು. ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಎಂ.ಎನ್. ರೆಡ್ಡಿ, ದಕ್ಷಿಣ ವಲಯ ಐಜಿಪಿ ಡಾ. ರಾಮಚಂದ್ರರಾವ್, ಕೆಪಿಎ ನಿರ್ದೇಶಕ ಎ.ಎಸ್.ಎನ್. ಮೂರ್ತಿ, ಡಿಸಿಪಿಗಳಾದ ಬಸವರಾಜ ವೈ. ಮಾಲಗತ್ತಿ, ಕೆ.ಪಿ. ಭೀಮಯ್ಯ, ಪ್ರಭಾಶಂಕರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement