ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ದೀಪಾಲಂಕಾರ ಮಾಲೀಕರ ಸಂಘ ವಾರ್ಷಿಕೋತ್ಸವ

Rashmi Kasaragodu
Updated On : 10 Jul 2013, 1:34 am

ಕ.ಪ್ರ.ವಾರ್ತೆ   ಟಿ.ನರಸೀಪುರ   ಜು. 9
ಸಂಘಟನೆಯ ಶಕ್ತಿ ಸದ್ಬಳಕೆ ಮಾಡಿಕೊಂಡು ವಿದ್ಯುತ್ ದೀಪಾಲಂಕಾರ ಹಾಗೂ ಧ್ವನಿವರ್ಧಕ ಮಾಲೀಕರ ಸಂಘಟನೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ವಿಸ್ತರಣೆಯಾಗಬೇಕು ಎಂದು ವಾಟಾಳು ಮಠದ ಸಿದ್ದಲಿಂಗ ಶಿವಚಾರ್ಯ ಸ್ವಾಮೀಜಿ ಹೇಳಿದರು.
ಇಲ್ಲಿನ ಟಿಎಪಿಸಿಎಂಎಸ್ನ ರೈತ ಭವನದಲ್ಲಿ ಮಂಗಳವಾರ ತಾಲೂಕು ವಿದ್ಯುತ್ ದೀಪಾಲಂಕಾರ ಹಾಗೂ ಧ್ವನಿವರ್ಧಕ ಮಾಲೀಕರ ಸಂಘಟನೆ ಹಾಗೂ ಮೈಸೂರು ನಗರ ವಿದ್ಯುತ್ ದೀಪಾಲಂಕಾರ ಹಾಗೂ ಧ್ವನಿವರ್ಧಕ ಮಾಲೀಕರ ಸಂಘದ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿ, ಹಲವು ಉದ್ದೇಶಗಳಿಂದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಘಟನೆ ಆರಂಭವಾಗಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.
ಟಿಎಪಿಸಿಎಂಎಸ್ ಅಧ್ಯಕ್ಷ ಟಿ.ಪಿ. ಸುಬ್ರಮಣ್ಯ ಮಾತನಾಡಿದರು. ಇತ್ತೀಚೆಗೆ ಮಡಿದ ವೃತ್ತಿ ಬಾಂಧವರಿಗೆ ಸಮಾರಂಭದಲ್ಲಿ ಮೌನಾಚರಣೆ ಮೂಲಕ ಗೌರವ ಸಲ್ಲಿಸಲಾಯಿತು. ಹಿರಿಯ ಧ್ವನಿವರ್ಧಕ ಮಾಲೀಕರಾದ ಮಾದೇಶ್, ಬಸವರಾಜು ಹಾಗೂ ಬಸವಣ್ಣ ಅವರನ್ನು ಸನ್ಮಾನಿಸಲಾಯಿತು. ಸಾರ್ವಜನಿಕರಿಗಾಗಿ ಆರೋಗ್ಯ ಉಚಿತ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ತಾಲೂಕು ಸಂಘದ ಉದ್ಘಾಟನೆ ಪ್ರಯುಕ್ತ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಿಸಲಾಯಿತು.
ಸಂಘದ ಜಿಲ್ಲಾಧ್ಯಕ್ಷ ಜಯಶಂಕರಸ್ವಾಮಿ, ಉಪಾಧ್ಯಕ್ಷ ಭೈರಪ್ಪ, ಗೌರವಾಧ್ಯಕ್ಷ ರುದ್ರೇಶ್, ಕಾರ್ಯದರ್ಶಿ ನಾಗೇಶಪ್ರಸಾದ್, ತಾಲೂಕು ಅಧ್ಯಕ್ಷ ದಾಸಪ್ಪ, ಉಪಾಧ್ಯಕ್ಷ ಸುರೇಶ್, ಕಾರ್ಯದರ್ಶಿ ಮುದ್ದಣ್ಣ, ಖಜಾಂಚಿ ನಂದೀಶ್, ಸಂಘಟನಾ ಕಾರ್ಯದರ್ಶಿ ಕೃಷ್ಣ, ಸಜ್ಜು, ನಾಗೇಶ್, ಸಂಘಟನೆಯ ಸ್ವಾಮಿ, ಶಿವಣ್ಣ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement