ಹುಣಸೂರಲ್ಲಿ ಎಸ್ಎಫ್ಐ ಪ್ರತಿಭಟನೆ
ಕ.ಪ್ರ.ವಾರ್ತೆ ಹುಣಸೂರು ಜು. 9
ಖಾಸಗಿ ವಿವಿ ಸ್ಥಾಪನೆ ವಿರೋಧಿಸಿ ಹಾಗೂ ಈ ಬಾರಿಯ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶೇ. 30ರಷ್ಟು ಹಣ ಮೀಸಲಿಡಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ತಾಲೂಕು ಘಟಕ ಪ್ರತಿಭಟನೆ ನಡೆಸಿತು.
ಇಲ್ಲಿನ ರಂಗನಾಥ ಬಡಾವಣೆಯಿಂದ ಪ್ರತಿಭಟನಾ ಮೆರವಣಿಗೆ ಹೊರಟ ಫೆಡರೇಷನ್ ವಿದ್ಯಾರ್ಥಿಗಳು ಖಾಸಗಿ ವಿವಿ ಸ್ಥಾಪನೆ ಬೇಡವೇ ಬೇಡ, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮಾಸಿಕ ಭತ್ಯೆ ಹೆಚ್ಚಿಸಿ ಎಂಬಿತ್ಯಾದಿ ಘೋಷಣೆ ಕೂಗಿ ಸಾರ್ವಜನಿಕರ ಗಮನ ಸೆಳೆದರು. ನಂತರ ತಾಲೂಕು ಕಚೇರಿ ಆವರಣದಲ್ಲಿ ಕೆಲಹೊತ್ತು ಧರಣಿ ನಡೆಸಿ, ಬಳಿಕ ತಹಸೀಲ್ಧಾರ್ ಅವರಿಗೆ ಮನವಿ ಸಲ್ಲಿಸಿದರು.
ಸದಸ್ಯರಾದ ಅಂಜುಶ್ರೀ, ಅಭಿ, ಮುರಳಿ, ನವೀನ್, ಮಂಜುಳಾ ಭಾಗವಹಿಸಿದ್ದರು.