ಸಿದ್ದು ಓಲೈಕೆಗಾಗಿ ಎಚ್ಡಿಕೆ ವಿರುದ್ಧ ಹೇಳಿಕೆ: ರಾಜಣ್ಣ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಓಲೈಸುವ ಸಲುವಾಗಿ ಪ್ರತಿಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಕಾಂಗ್ರೆಸ್ ಮುಖಂಡರು ಹೇಳಿಕೆ ನೀಡುತ್ತಿದ್ದಾರೆ ಎಂದು ಜೆಡಿಎಸ್ ನಗರಾಧ್ಯಕ್ಷ ರಾಜಣ್ಣ ಟೀಕಿಸಿದ್ದಾರೆ.
ಇಲ್ಲಿನ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಬೆಂಗಳೂರಿನ ಒಕ್ಕಲಿಗರ ಸಮಾವೇಶದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಮಾತನಾಡುವಾಗ, ಮುಖ್ಯಮಂತ್ರಿಗಳು ವರ್ಗಾವಣೆ ವಿಚಾರದಲ್ಲಿ ಜಾತ್ಯತೀತವಾಗಿ ನಡೆದುಕೊಳ್ಳಬೇಕು ಹಾಗೂ ಒಕ್ಕಲಿಗ ಜಾತಿಯ ಅಧಿಕಾರಿಗಳ ವಿಚಾರದಲ್ಲಿ ಯಾವುದೇ ದ್ವೇಷ ರಾಜಕಾರಣ ಮಾಡಬಾರದು ಎಂದು ಸಲಹೆ ನೀಡಿದರು.
ಆದರೆ, ಇದನ್ನು ತಪ್ಪಾಗಿ ಅರ್ಥೈಸಿಕೊಂಡು ಕಾಂಗ್ರೆಸ್ ಮುಂಖಡರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಸಭೆಯಲ್ಲಿ ಜೆಡಿಎಸ್ ರಾಜ್ಯ ಸಮಿತಿ ಸದಸ್ಯ ಎನ್.ಆರ್. ರವಿಚಂದ್ರಗೌಡ, ನಗರ ಕಾರ್ಯಾಧ್ಯಕ್ಷ ಎಸ್ಬಿಎಂ ಮಂಜು, ಉಪಾಧ್ಯಕ್ಷ ವೇಣುಗೋಪಾಲ್ ಇದ್ದರು.