ಹೆಣ್ಣು ಮಕ್ಕಳು ಶಿಕ್ಷಿತರಾದರೆ ದೇಶದ ಪ್ರಗತಿ
ಕ.ಪ್ರ.ವಾರ್ತೆ ಯಳಂದೂರು ಜು.14
ಹೆಣ್ಣುಮಕ್ಕಳು ಶಿಕ್ಷಿತರಾದರೆ ದೇಶ ಬದಲಾಗಲು ಸಾಧ್ಯ ಎಂದು ಮಾರ್ಟಳ್ಳಿ ಜೆಎಸ್ಎಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಉಮಾಪತಿ ತಿಳಿಸಿದರು.
ಪಟ್ಟಣದ ಜೆಎಸ್ಎಸ್ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಘಾಟನೆ ಹಾಗೂ ಸ್ವಾಗತ ಸಮಾರಂಭದಲ್ಲಿ ಮಾತನಾಡಿ, ಹೆಣ್ಣುಮಕ್ಕಳು ಕೀಳರಿಮೆ ಬಿಟ್ಟು ತಮ್ಮಲ್ಲಿರುವ ಪ್ರತಿಭೆ ಹೊರ ತರಲು ಕಾಲೇಜಿನಲ್ಲಿ ವೇದಿಕೆ ಸ್ಥಾಪಿಸಲಾಗಿದೆ ಎಂದರು.
ದೇಶದಲ್ಲಿ ಪುರುಷರಿಗಂತ ಮಹಿಳೆಯರಿಗೆ ಹೆಚ್ಚಿನ ಜವಾಬ್ದಾರಿಯಿದೆ. ಆದ್ದರಿಂದ ಹೆಣ್ಣು ಮಕ್ಕಳು ಶಿಕ್ಷಿತರಾದರೆ ರಾಷ್ಟ್ರದ ಬದಲಾಗಲು ಸಾಧ್ಯ ಎಂದರು.
ಮಾನಸಗಂಗೋತ್ರಿಯ ಪ್ರಾದ್ಯಾಪಕ ಡಾ. ಜಿ.ಎಸ್.ಪ್ರೇಮ್ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಜೆಎಸ್ಎಸ್ ಮಹಿಳಾ ಪದವಿಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಜಿ.ರಮೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಕಾಲೇಜಿನಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.
ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಅಭಿಲಾಷಾ, ಉಪನ್ಯಾಸಕರಾದ ಗಿರೀಶ್ ಹರವೆ, ಪಿ.ಮಹೇಶ್, ಸ್ವಾಮಿ, ಗಾಯಿತ್ರಿ, ಅಕ್ಕ ಮಹದೇವಮ್ಮ, ಶಿವಲಿಂಗಸ್ವಾಮಿ ಹಾಗೂ ಕಾಲೇಜಿನ ವಿದ್ಯಾರ್ಥಿನಿಯರು ಇದ್ದರು.