ಗ್ರಾಪಂನಿಂದ ಕಾನೂನು ವಿರೋಧಿ ತೀರ್ಮಾನ
ದೂರ (ಮೈಸೂರು ತಾ): ದೂರ ಗ್ರಾಪಂ ಬಿಲ್ಕಲೆಕ್ಟರ್ ಸ್ವಾಮಿ ಅವರನ್ನು ಅಮಾನತುಗೊಳಿಸಿದ್ದರೂ ಗ್ರಾಪಂ ಸಾಮಾನ್ಯ ಸಭೆಯು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳುವ ಸಂಬಂಧ ನಿರ್ಣಯ ಕೈಗೊಂಡಿರುವುದು ಸರಿಯಲ್ಲ ಎಂದು ಗ್ರಾಪಂ ಸದಸ್ಯ ಟಿ.ಪಿ. ಪ್ರಕಾಶ್, ಮಾಜಿ ಅಧ್ಯಕ್ಷ ಜಯಮ್ಮ ಹೇಳಿದ್ದಾರೆ. ಅಧಿಕಾರ ದುರುಪಯೋಗ, ಭ್ರಷ್ಟಾಚಾರದಲ್ಲಿ ಸಿಲುಕಿರುವ ದೂರು ಗ್ರಾಪಂನ ಬಿಲ್ಕಲೆಕ್ಟರ್ ಡಿ.ಎಸ್.ಪಿ. ಸ್ವಾಮಿ ಅವರನ್ನು ಅಮಾನತುಗೊಳಿಸಿದ್ದರೂ ಗ್ರಾಪಂ ಅಧ್ಯಕ್ಷರು ಮತ್ತು ಕೆಲವು ಸದಸ್ಯರು ಕಾನೂನು ಬಾಹಿರವಾಗಿ ಅವರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳುವ ಸಂಬಂಧ ಸಾಮಾನ್ಯಸಭೆಯಲ್ಲಿ ತೀರ್ಮಾನ ಕೈಗೊಂಡಿರುವುದು ಸರಿಯಲ್ಲ. ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಜಿಪಂ ಸಿಇಒ ಅವರಿಗೆ ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಅಲ್ಲದೆ ಗ್ರಾಪಂ ಪಿಡಿಒ ಚೇತನ ಅವರ ಕೈ ಕೆಳಗೆ ನಾನು ಕೆಲಸ ಮಾಡುವುದಿಲ್ಲ. ಎಂಬ ನೆಪ ಹೇಳುವ ಸ್ವಾಮಿ ಅವರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಬಾರದು ಎಂದು ಅವರು ಒತ್ತಾಯಿಸಿದ್ದಾರೆ.