ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಜನಸಂಖ್ಯೆ ನಿಯಂತ್ರಿಸದಿದ್ದಲ್ಲಿ ಪ್ರತಿಕೂಲ ಪರಿಣಾಮ ಖಚಿತ'

Rashmi Kasaragodu
Updated On : 16 Jul 2013, 1:15 am

ಕೆ.ಆರ್. ನಗರ: ದೇಶದ ಜನಸಂಖ್ಯೆಯ ಏರಿಕೆಯ ಪ್ರಮಾಣವನ್ನು ನಿಯಂತ್ರಿಸದಿದ್ದರೆ ಭವಿಷ್ಯದಲ್ಲಿ ಜನರ ಬದುಕು ಅತ್ಯಂತ ದುಸ್ತರವಾಗಿ, ಮೂಲ ಸವಲತ್ತುಗಳಿಗಾಗಿ ಕಚ್ಚಾಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಶಿವಪ್ರಸಾದ್ ಹೇಳಿದರು.
ಇಲ್ಲಿನ ತಾಪಂ ಸಭಾಂಗಣದಲ್ಲಿ ಗುರುವಾರ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕುಟುಂಬಕ್ಕೆ ಒಂದೇ ಮಗು ಸಾಕು ಎಂಬ ಘೋಷ ವಾಕ್ಯದೊಂದಿಗೆ ವಿಶ್ವಸಂಸ್ಥೆಯು ಜನಸಂಖ್ಯಾ ನಿಯಂತ್ರಣಕ್ಕೆ ಮುಂದಾಗಿದ್ದು, ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಕೋರಿದರು. ತಾಪಂ ಅಧ್ಯಕ್ಷೆ ಕವಿತಾ ರವಿಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಂ.ಬಿ.ಲೋಕನಾಥ್ ಮಾತನಾಡಿದರು. ಜಿಪಂ ಸದಸ್ಯ ರಾಜಯ್ಯ, ತಾಪಂ ಉಪಾಧ್ಯಕ್ಷೆ ಶಕುಂತಲಾ ರಮೇಶ್, ಸದಸ್ಯ ನಾಗಣ್ಣ, ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ರಾಮಚಂದ್ರ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಿಂಡಿಮ ಶಂಕರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಮೇಲ್ವಿಚಾರಕ ತಿಪ್ಪೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement