ವಿಷ ಸೇವಿಸಿ ಮಾನಸಿಕ ಅಸ್ವಸ್ಥ ಆತ್ಮಹತ್ಯೆ
ಮೈಸೂರು: ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಶಾಂತಲ ಚಿತ್ರಮಂದಿರ ಹಿಂಭಾಗ ಚಾಮುಂಡೇಶ್ವರಿ ನರ್ಸಿಂಗ್ ಹೋಂ ಬಳಿ ಸೋಮವಾರ ಬೆಳಗ್ಗೆ ನಡೆದಿದೆ. ಮೈಸೂರು ತಾಲೂಕು ಕೆ.ಸಾಲುಂಡಿ ನಿವಾಸಿ ಕರೀಗೌಡ ಎಂಬವರ ಪುತ್ರ ಹುಚ್ಚೇಗೌಡ (35) ಆತ್ಮಹತ್ಯೆ ಮಾಡಿಕೊಂಡವರು.
ಇವರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ಮಾನಸಿಕ ಅಸ್ವಸ್ಥರಾಗಿದ್ದು ಇವರು ಬೆಂಗಳೂರಿನ ನಿಮ್ಹಾನ್ಸ್ನಲ್ಲಿ ಚಿಕಿತ್ಸೆ ಪಡೆದಿದ್ದರು. ಕೆ.ಆರ್. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.