ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ನಗರದ ವಿವಿಧೆಡೆ ವಿದ್ಯಾರ್ಥಿಗಳ ಧರಣಿ

Rashmi Kasaragodu
Updated On : 19 Jul 2013, 12:15 pm

ಕ.ಪ್ರ.ವಾರ್ತೆ   ಮೈಸೂರು   ಜು. 18
ಸಿಇಟಿ ಗೊಂದಲ ನಿವಾರಣೆಗೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟಿಸಿದರು.
ಸಿಇಟಿ ಶುಲ್ಕದಲ್ಲಿ ಯಾವುದೇ ಹೆಚ್ಚಳ ಇಲ್ಲ ಎಂದು ಹೇಳಿಕೆ ನೀಡಿದ ಸರ್ಕಾರ, ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಗೊಂದಲ ಸೃಷ್ಟಿಸಿದೆ. ಕಾಲೇಜುಗಳಲ್ಲಿ ಪಡೆಯುತ್ತಿರುವ ಹೆಚ್ಚುವರಿ ಶುಲ್ಕದ ಬಗ್ಗೆ ಯಾವುದೇ ನಿಯಮ ರೂಪಿಸದೆ ವಿದ್ಯಾರ್ಥಿಗಳಿಗೆ ಘೋರ ಅನ್ಯಾಯ ಎಸಗಿದೆ. ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಲು ಇಕ್ಕಟ್ಟಿಗೆ ಸುಲುಕಿದ್ದಾರೆ. ಖಾಸಗಿ ಕಾಲೇಜುಗಳಿಗೆ ಶುಲ್ಕ ಅವ್ಯವಹಾರ ನಡೆಸಲು ಪರೋಕ್ಷವಾಗಿ ಸರ್ಕಾರ ಬೆಂಬಲ ನೀಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಹತ್ತಾರು ವರ್ಷಗಳಿಂದ ಶುಲ್ಕ ಏರಿಕೆ ಬಗ್ಗೆ ಪ್ರತಿವರ್ಷ ಬೇಡಿಕೆ ಇಡುತ್ತಿದ್ದ ಕಾಮೆಡ್-ಕೆ ಈ ವರ್ಷ ಮೌನವಾಗಿತ್ತು. ಇದನ್ನು ಗಮನಿಸಿದರೆ ಕಾಮೆಡ್-ಕೆ ಮತ್ತು ಸರ್ಕಾರ ನಡುವೆ ಒಳ ಒಪ್ಪಂದ ನಡೆದಿರುವ ಬಗ್ಗೆ ಸಂಶಯ ಉಂಟಾಗಿದೆ. ಸರ್ಕಾರವು ಕಾಮೆಡ್-ಕೆ ಏಜೆಂಟ್ ಆಗಿ ವರ್ತಿಸುತ್ತಿದೆ ಎಂದು ಕಿಡಿಕಾರಿದರು.
ರಾಜ್ಯ ಸರ್ಕಾರವು ಸಿಇಟಿ ಸಂಬಂಧಪಟ್ಟ ಎಲ್ಲಾ ಗೊಂದಲಗಳಿದೆ ತೆರೆ ಎಳೆಯಬೇಕು. ಕೌನ್ಸೆಲಿಂಗ್ ಎಲ್ಲಾ ಹಂತಗಳನ್ನು ಪಾರದರ್ಶಕವಾಗಿ ಮತ್ತು ಪ್ರಾಮಾಣಿಕವಾಗಿ ನಡೆಸಬೇಕು. ಸಿಇಟಿ ಶುಲ್ಕ ಪಾವತಿಸಿದ ನಂತರ ಕಾಲೇಜು ಆಡಳಿತ ಮಂಡಳಿಯವರು ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕ ಪಡೆಯದಂತೆ ಆದೇಶ ಹೊರಡಿಸಬೇಕು. ಹೆಚ್ಚಿನ ಶುಲ್ಕ ಪಡೆಯುತ್ತಿರುವ ಕಾಲೇಜುಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ಎಬಿವಿಪಿ ನಗರ ಕಾರ್ಯದರ್ಶಿ ವೆಂಕಟೇಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಿವಕುಮಾರ್, ಜಿಲ್ಲಾ ಸಂಚಾಲಕ ರಾಕೇಶ್, ವಿಭಾಗ ಸಂಘಟನಾ ಕಾರ್ಯದರ್ಶಿ ನಾಗೇಂದ್ರಸ್ವಾಮಿ ನೇತೃತ್ವ ವಹಿಸಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement