ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ರಾಯ್ಕರ್ ಆಸ್ತಿ ಮುಟ್ಟುಗೋಲಿಗೆ ಆಗ್ರಹ

Rashmi Kasaragodu
Updated On : 21 Jul 2013, 12:41 pm

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಕೆ.ಎಸ್. ರಾಯ್ಕರ್ ವಿರುದ್ಧ ಸಿಐಡಿ ತನಿಖೆ ನಡೆಸಿ ಅವರ ಆಸ್ತಿಯನ್ನು ಮುಟ್ಟಗೋಲು ಹಾಕಿಕೊಳ್ಳಬೇಕು ಎಂದು ದಲಿತ ಹಿಂದುಳಿದ ಅಲ್ಪಸಂಖ್ಯಾತರ ಸಮನ್ವಯ ವೇದಿಕೆ ಆರೋಪಿಸಿದೆ. 2008 ರಿಂದ 2012ನೇ ಸಾಲಿನವರೆಗೆ ಆಯುಕ್ತರಾಗಿದ್ದ ಕೆ.ಎಸ್. ರಾಯ್ಕರ್ ಅವಧಿಯಲ್ಲಿ ಶೇ.22.75 ರ ಯೋಜನೆಯ ಹಣವನ್ನು ಅರ್ಹ ಫಲಾನುಭವಿಗಳಿಗೆ ನೀಡದೆ ಸುಮಾರು 9 ಕೋಟಿಗೂ ಹೆಚ್ಚು ಹಣ ವಂಚಿಸಿದ್ದಾರೆ ಎಂದು ವೇದಿಕೆಯ ಗೌರವ ಅಧ್ಯಕ್ಷ ಹರಿಹರ ಆನಂದಸ್ವಾಮಿ ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು. ಈ ಬಗ್ಗೆ ನಂತರ ಆಯುಕ್ತರಾಗಿ ಬಂದ ಡಾ.ಎಂ.ಆರ್.ರವಿ ಅವರು ಪ್ರಾದೇಶಿಕ ಆಯುಕ್ತರ ಮೂಲಕ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ 11 ಕೋಟಿಗೂ ಹೆಚ್ಚು ಹಣ ಅವ್ಯವಹಾರ ನಡೆದಿದೆ ಎಂದು ತಿಳಿಸಿದ್ದಾರೆ. ಇಂದಿನ ಕಾಂಗ್ರೆಸ್ ಸರ್ಕಾರವು ಸಹ ಇದರ ತನಿಖೆಗಾಗಿ ಸಮಿತಿಯನ್ನು ರಚಿಸಿದೆ ಎಂದು ನಗರಾಭಿವೃದ್ಧಿ ಸಚಿವಾಲಯ ತಿಳಿಸಿರುವುದು ಸಂತಸದ ಸಂಗತಿ ಎಂದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement