ಜೂಜಾಟ: 100 ಮಂದಿ ಬಂಧನ
ಮೈಸೂರು: ನಗರದ ಲಕ್ಷ್ಮಿಪುರಂ ಸ್ಪೋರ್ಟ್ಸ್ ಕ್ಲಬ್ ಮೇಲೆ ಕೆ.ಆರ್. ಉಪ ವಿಭಾಗದ ಪೊಲೀಸರು ಭಾನುವಾರ ಸಂಜೆ ದಾಳಿ ನಡೆಸಿ, ಜೂಜಾಡುತ್ತಿದ್ದ ನೂರಾರು ಮಂದಿಯನ್ನು ಬಂಧಿಸಿದ್ದಾರೆ. ಸ್ಪೋರ್ಟ್ಸ್ ಕ್ಲಬ್ನಲ್ಲಿ ಅನಧಿಕೃತವಾಗಿ ಜೂಜಾಟ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕೆ.ಆರ್. ಉಪ ವಿಭಾಗದ ಎಸಿಪಿ ಎ.ಎನ್. ಪ್ರಕಾಶ್ಗೌಡ ಮತ್ತು ಸಿಬ್ಬಂದಿ ಈ ದಾಳಿ ನಡೆಸಿ ನೂರಕ್ಕೂ ಹೆಚ್ಚಿನ ಮಂದಿಯನ್ನು ಬಂಧಿಸಿ, ಲಕ್ಷಾಂತರ ರು. ವಶಪಡಿಸಿಕೊಂಡಿದ್ದಾರೆ ಎಂದು ನಗರ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಎ.ಎನ್. ರಾಜಣ್ಣ ತಿಳಿಸಿದ್ದಾರೆ. ಈ ಸಂಬಂಧ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.