ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಸುಶಿಕ್ಷಿತ ಸಮಾಜದಿಂದ ದೇಶ ಅಭಿವೃದ್ಧಿ'

Rashmi Kasaragodu
Updated On : 22 Jul 2013, 12:59 pm

ಕ.ಪ್ರ.ವಾರ್ತೆ   ಹುಣಸೂರು   ಜು. 21
ದೇಶ ಅಭಿವೃದ್ಧಿ ಪಥದತ್ತ ಸಾಗಬೇಕೆಂದರೆ ಸುಶಿಕ್ಷಿತ ಸಮಾಜದಿಂದ ಮಾತ್ರ ಸಾಧ್ಯ ಎಂದು ಮುಖ್ಯೋಪಾಧ್ಯಾಯ ಮಹದೇವ್ ಅಭಿಪ್ರಾಯಪಟ್ಟರು.
ತಾಲೂಕಿನ ಗಾವಡಗೆರೆಯಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿ ಶಾರದಾಂಬ ಮಹಿಳಾ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆಯಲ್ಲಿ ಶಿಕ್ಷಣದ ಮಹತ್ವದ ಕುರಿತು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸರ್ಕಾರಗಳು ಗ್ರಾಮೀಣ ಭಾಗಗಳಲ್ಲೂ ಶಾಲೆ ತೆರೆಯುತ್ತಿವೆ. ಅಲ್ಲದೆ, ಖಾಸಗಿ ಶಿಕ್ಷಣ ಸಂಸ್ಥೆಗಳೂ ವಿದ್ಯಾಸಂಸ್ಥೆ ತೆರೆದು ಶಿಕ್ಷಣ ನೀಡಲು ಮುಂದೆ ಬಂದಿವೆ. ಆದರೆ, ಗ್ರಾಮೀಣ ಭಾಗದ ಜನತೆ ತಮ್ಮ ಮಕ್ಕಳನ್ನು ಕಾರಣಾಂತರಗಳಿಂದ ಅರ್ಧಕ್ಕೆ ಶಿಕ್ಷಣ ನಿಂತು ಹೋಗುವಂತೆ ಮಾಡುತ್ತಿದ್ದಾರೆ ಎಂದರು.
ಯೋಜನೆಯ ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಶಿಲ್ಪಾ, ಗಾವಡಗೆರೆ ಅಂಗನವಾಡಿ ಕಾರ್ಯಕರ್ತೆ ಭಾಗ್ಯಮ್ಮ, ಯೋಜನೆಯ ಸೇವಾ ಪ್ರತಿನಿಧಿಗಳಾದ ಶಶಿಕಲಾ, ಚಂದ್ರಕಲಾ, ನಟರಾಜ್, ಚಪ್ಪರದಮ್ಮ ತಂಡದ ಸದಸ್ಯೆ ಭಾಗ್ಯಮ್ಮ, ಪವಿತ್ರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement