ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ವರ್ಗಾವಣೆ ನೀತಿ ಖಂಡಿಸಿ ಪ್ರತಿಭಟನೆ

Srinivasa Murthy VN
Updated On : 24 Jul 2013, 10:45 am

ಮೈಸೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಕರ ಅವೈಜ್ಞಾನಿಕ ವರ್ಗಾವಣೆ ನೀತಿ ಬದಲಾಯಿಸಿ ಬ್ಯಾಂಕ್ ಮಾದರಿ ವರ್ಗಾವಣೆಗೆ ಆಗ್ರಹಿಸಿ ಸರ್ವಜನಾಂಗ ಹಿತರಕ್ಷಣಾ ವೇದಿಕೆಯವರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹುದ್ದೆಗೆ ಐಎಎಸ್, ಕೆಎಎಸ್ ಅಧಿಕಾರಿಗಳನ್ನು ನೇಮಿಸಬೇಕು. ಈಗಿರುವ ಬಡ್ತಿ ಅಧಿಕಾರಿಗಳನ್ನು ಶಾಲಾ ಕಾಲೇಜುಗಳಿಗೆ ಪಾಠ- ಪ್ರವಚನ ಮಾಡಲು ನಿಯೋಜಿಸಿ ಇಲಾಖೆಯ ದಕ್ಷತೆ ಹಾಗೂ ಪಾರದರ್ಶಕತೆ ಕಾಪಾಡಬೇಕು. ಶಿಕ್ಷಣ ಇಲಾಖೆಯಲ್ಲಿರುವ ಭ್ರಷ್ಟ ಅಧಿಕಾರಿಗಳು ಮತ್ತು ನೌಕರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ವೇದಿಕೆಯ ಅಧ್ಯಕ್ಷ ವೇಣುಗೋಪಾಲ್, ಮುಖಂಡರಾದ ಹಂ. ಲಕ್ಕೇಗೌಡ, ಬಿ.ಎಚ್. ಗೋವಿಂದೇಗೌಡ, ಎಂ. ಪ್ರಭುದೇವ, ಸಿದ್ದಯ್ಯ, ಬಿ. ಜಗದೀಶ್, ನಾಡನಹಳ್ಳಿ ಕೆ. ಸಿದ್ದರಾಜು, ಹೊನ್ನಪ್ಪಾಚಾರ್, ರಾಜಮ್ಮ, ತೇಜಮಣಿ, ಕೆ. ನಿಂಗೇಗೌಡ, ಶಂಕರ್, ಸಿ.ಟಿ. ತಮ್ಮಣ್ಣ, ಬಿ.ವಿ. ಕೆಂಚಪ್ಪ ಇದ್ದರು.

30ಕ್ಕೆ ಕೈಗಾರಿಕಾ ಕ್ಲಸ್ಟರ್ ಯೋಜನೆ ಬಗ್ಗೆ ಅರಿವು
ಮೈಸೂರು:
ಮೈಸೂರು ಕೈಗಾರಿಕೆಗಳ ಸಂಘ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ತು ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದೊಂದಿಗೆ ಜು. 30ರ ಬೆಳಗ್ಗೆ 10ಕ್ಕೆ ಕೈಗಾರಿಕೆಗಳ ಸಂಘದ ಸಭಾಂಗಣದಲ್ಲಿ ಕೈಗಾರಿಕಾ ಇಲಾಖೆಯ ಕ್ಲಸ್ಟರ್ ಅಭಿವೃದ್ಧಿ ಯೋಜನೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಿದೆ.
ಮೈಸೂರು ಕೈಗಾರಿಕೆಗಳ ಸಂಘದ ಅಧ್ಯಕ್ಷ ಪಿ. ವಿಶ್ವನಾಥ್ ಅಧ್ಯಕ್ಷತೆ ವಹಿಸುವರು. ಕೆಸಿಟಿಯು ವ್ಯವಸ್ಥಾಪಕ ನಿರ್ದೇಶಕ ವಿ. ಮುನಿಯಪ್ಪ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಎಂ. ಶಿವಶಂಕರ್ ಹಾಗೂ ಕೆನರಾ ಬ್ಯಾಂಕ್ ಉಪ ಪ್ರಧಾನ ವ್ಯವಸ್ಥಾಪಕ ಡಾ. ರಾಮಚಂದ್ರ, ಕೆಐಎಡಿಬಿಯ ಅಭಿವೃದ್ಧಿ ಅಧಿಕಾರಿ ಎಚ್.ಎಸ್. ಬಸವರಾಜ ಮಾತನಾಡುವರು.  ಕ್ಲಸ್ಟರ್ ಯೋಜನೆಯಲ್ಲಿ ಭಾಗವಹಿಸಲು ಇಚ್ಛಿಸುವ ಮೈಸೂರು ಕೈಗಾರಿಕೆಗಳ ಸಂಘದಲ್ಲಿ ನೋಂದಾಯಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶಕುಮಾರ್ ಜೈನ್ ತಿಳಿಸಿದ್ದಾರೆ. ವಿವರಗಳಿಗೆ ಮೊ. 9986444654 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement