ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಕಾಂಗ್ರೆಸ್ ಸರ್ಕಾರದಿಂದ ನಾಯಕ ಜನಾಂಗಕ್ಕೆ ಅನ್ಯಾಯ: ಆರೋಪ

Srinivasa Murthy VN
Updated On : 26 Jul 2013, 12:05 pm

ಕ.ಪ್ರ.ವಾರ್ತೆ ಮೈಸೂರು ಜು. 25
ನಾಯಕ ಜನಾಂಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯವಾಗಿದೆ ಎಂದು ಅಖಿಲ ಕರ್ನಾಟಕ ನಾಯಕ ಜನಾಂಗದ ಹಿತರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ದ್ಯಾವಪ್ಪನಾಯಕ ಆರೋಪಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಹಿಡಿಯುವಲ್ಲಿ ನಾಯಕ ಸಮುದಾದವರು ಹೆಚ್ಚಿನ ಮತ ನೀಡಿದ್ದಾರೆ. ಆದರೆ, ಆಡಳಿತಕ್ಕೆ ಬಂದ ಕಾಂಗ್ರೆಸ್‌ನಲ್ಲಿ 9 ಮಂದಿ ನಾಯಕ ಜನಾಂಗದ ಶಾಸಕರಿದ್ದರೂ ಕೇವಲ ಸಂಪುಟದಲ್ಲಿ ಒಬ್ಬರಿಗೆ ಮಾತ್ರ ಮಂತ್ರಿ ಪದವಿ ನೀಡಲಾಗಿದೆ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.
ಈ ಹಿಂದಿನ ಬಿಜೆಪಿ ಸರ್ಕಾರ 3 ಮಂದಿಗೆ ಮಂತ್ರಿ ಪದವಿ ನೀಡಿತ್ತು. ಅಂತೆಯೇ ಜೆಡಿಎಸ್ ಸರ್ಕಾರದ ಅವಧಿಯಲ್ಲೂ 3 ಮಂದಿಗೆ ಮಂತ್ರಿ ಸ್ಥಾನ ನೀಡಿಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಕೇವಲ ಒಂದು ಸ್ಥಾನ ಮಾತ್ರ ನೀಡಿದೆ. ಮುಂದಿನ ಸಚಿವ ಸಂಪುಟ ಅವಧಿಯಲ್ಲಿ ಇನ್ನೂ 3 ಮಂದಿ ಜನಾಂಗದ ಪ್ರತಿನಿಧಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಮೈಸೂರು- ಚಾಮರಾಜನಗರ ಜಿಲ್ಲೆಗೆ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷವು ಎಂಎಲ್‌ಸಿ ಸ್ಥಾನ ನೀಡಿವೆ. ಆದರೆ, ಕಾಂಗ್ರೆಸ್ ಸರ್ಕಾರ ಇಲ್ಲಿಯತನಕ ನಾಯಕ ಜನಾಂಗದವರಿಗೆ ಎಂಎಲ್‌ಸಿ ಮಾಡಿಲ್ಲ. ಆದ್ದರಿಂದ ಈ ಬಾರಿ ಈ ಭಾಗದ ಜನಾಂಗ ಮುಖಂಡರಾದ ಹಾಗೂ ಜಿಪಂ ಮಾಜಿ ಅಧ್ಯಕ್ಷ ಎಸ್.ಸಿ. ಬಸವರಾಜು ಅವರನ್ನು ಎಂಎಲ್‌ಸಿಯಾಗಿ ಮಾಡಬೇಕೆಂದು ಒತ್ತಾಯಿಸಿದರು.
ನಿಗಮ ಮಂಡಳಿಯ ಅಧ್ಯಕ್ಷ ಹಾಗೂ ಸದಸ್ಯರ ನೇಮಕಾತಿಯಲ್ಲಿ ಈ ಜನಾಂಗದವರಿಗೆ ಆದ್ಯತೆ ನೀಡಬೇಕು. ಬೇಡಿಕೆಗಳನ್ನು ಕಾಂಗ್ರೆಸ್ ಸರ್ಕಾರ ಪರಿಗಣಿಸದೆ ಹೋದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾಯಕ ಸಮುದಾಯವು ಕಾಂಗ್ರೆಸ್ ಪಕ್ಷದ ವಿರುದ್ಧ ಮತ ಚಲಾಯಿಸಲಿದೆ ಎಂದು ಎಚ್ಚರಿಕೆ ನೀಡಿದರು.
ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಹಣಸೂರು, ಜಿಲ್ಲಾಧ್ಯಕ್ಷ ಶ್ರೀಧರ್ ಬೆಟ್ಟ, ನಂಜನಗೂಡು ತಾಲೂಕು ಅಧ್ಯಕ್ಷ ಎಚ್.ಆರ್. ಪ್ರಕಾಶ್ ಹಾಗೂ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷ ಪಿ. ಮಹದೇವನಾಯಕ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement