ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ನಿಷ್ಠಾವಂತರಿಗೆ ಟಿಕೆಟ್ ನೀಡಿ

Vishwanath S
Updated On : 31 Jul 2013, 12:32 pm

ಕ.ಪ್ರ.ವಾರ್ತೆ ,  ಮೈಸೂರು ,  ಜು. 30
ಮೈಸೂರು- ಚಾಮರಾಜನಗರ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡುವಂತೆ ಅಜೀಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಫೀಕ್ ಅಹ್ಮದ್ ಮನವಿ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಪತ್ರದ ಪ್ರಕಾರ 2 ವರ್ಷ ಕಾರ್ಯಕರ್ತರಾಗಿ ದುಡಿದವರಿಗೆ ಸ್ಥಾನಮಾನ ನೀಡಬೇಕೆಂಬ ಅವರ ಹೇಳಿಕೆಗೆ ನಾನು ಬೆಂಬಲಿಸುತ್ತೇನೆ. ಕಳೆದ ಚುನಾವಣೆಯಲ್ಲಿ ಸಿ. ಬಸವೇಗೌಡರು ಜೆಡಿಎಸ್ ಬಿಟ್ಟು ಕಾಂಗ್ರೆಸ್‌ಗೆ ಬಂದಿದ್ದಾರೆ. ಅಂಥವರಿಗೆ ಟಿಕೆಟ್ ನೀಡುತ್ತೇವೆ ಎಂಬ ವದಂತಿ ನೋವು ತಂದಿದೆ. ಆದ್ದರಿಂದ ಈ ಬಾರಿಯಾದರೂ ಗೆಲ್ಲಲೇಬೇಕೆಂಬ ಛಲ ಇದ್ದಲ್ಲಿ ನಿಷ್ಠಾವಂತರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ರಘು ಪರ ಬ್ಯಾಟಿಂಗ್: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಯಕ ಸಮಾಜದ ಒಗ್ಗಟ್ಟಿಗೆ ಶ್ರಮಿಸಿದ ಕೆಪಿಸಿಸಿ ಸದಸ್ಯ ಆರ್. ರಘು ಅವರಿಗೆ ಟಿಕೆಟ್ ನೀಡುವಂತೆ ಮೈಸೂರು ನಗರ ಮೇದ ಜನಾಂಗದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಿ. ಮಂಜುನಾಥಕುಮಾರ್, ನಗರ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ಶೌಕತ್ ಅಲಿಖಾನ್, ಮಾಜಿ ಉಪಾಧ್ಯಕ್ಷ ವಿ. ಜಗದೀಶ ಕುಮಾರ್ ಒತ್ತಾಯಿಸಿದ್ದಾರೆ.
ಗೋವಿಂದಯ್ಯಗೆ ನೀಡುವಂತೆ ಮನವಿ: ಪ್ರಗತಿಪ ಚಿಂತಕ ಪ್ರೊ. ಎಚ್. ಗೋವಿಂದಯ್ಯ ಅವರು ದಲಿತ ಚಳವಳಿಯ ಪ್ರಮುಖರಾಗಿದ್ದಾರೆ. ಸಮಾಜದ ಎಲ್ಲಾ ಹಿಂದುಳಿದ ಸಮುದಾಯಗಳ ಪರ ದನಿ ಎತ್ತಿದ್ದಾರೆ. ಈಗಾಗಲೇ ಸಂಸದ ಸ್ಥಾನಕ್ಕೆ ಸ್ಪರ್ಧಿಸಿಯೂ ಅನುಭವವುಳ್ಳವರಾಗಿದ್ದಾರೆ. ಆದ್ದರಿಂದ ಅವರಿಗೆ ಟಿಕೆಟ್ ನೀಡುವಂತೆ ಕರ್ನಾಟಕ ವಿಕಾಸ ವಾಹಿನಿ ರಾಜ್ಯ ಸಂಚಾಲಕ ಎಸ್. ಶ್ರೀಕಾಂತ್, ನಗರ ಸಂಚಾಲಕ ಪೂರೀಗಾಲಿ ಮರಡಶಮೂರ್ತಿ ಮನವಿ ಮಾಡಿದ್ದಾರೆ.
ಮಂಜುನಾಥ್ ಪರ ಮನವಿ: ಮಾಜಿ ಶಾಸಕ ಎನ್. ಮಂಜುನಾಥ್ ಅವರಿಗೆ ಟಿಕೆಟ್ ನೀಡುವಂತೆ ನಗರ ಕಾಂಗ್ರೆಸ್ ಪ.ಜಾತಿ ವಿಭಾಗದ ಉಪಾಧ್ಯಕ್ಷ ಬಿ. ಪ್ರಸಾದ್ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement