ದಂತ ವೈದ್ಯರಿಂದ ಜನಜಾಗೃತಿ ಅಭಿಯಾನ
ಕ.ಪ್ರ.ವಾರ್ತೆ ಮೈಸೂರು ಜೂ. 3
ವಿಶ್ವ ತಂಬಾಕುರಹಿತ ದಿನದ ಅಂಗವಾಗಿ ಇಲ್ಲಿನ ವಿವಿಧ ದಂತ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ವೈದ್ಯರು ಜನಜಾಗೃತಿ ಜಾಥಾ ನಡೆಸಿ ಸಾರ್ವಜನಿಕರ ಗಮನ ಸೆಳೆದರು.
ಭಾರತೀಯ ದಂತ ವೈದ್ಯರ ಸಂಘದ ಮೈಸೂರು ಘಟಕ, ಜೆಎಸ್ಎಸ್ ವೈದ್ಯಕೀಯ ಕಾಲೇಜು ಹಾಗೂ ಫರೂಕೀಯ ದಂತ ಕಾಲೇಜು ಸಂಯುಕ್ತಾಶ್ರಯದಲ್ಲಿ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಿಂದ ಜಾಗೃತಿ ಜಾಥಾ ಏರ್ಪಡಿಸಿತ್ತು. ನಂತರ ಅರಮನೆ ಮುಂಭಾಗದಿಂದ ಹೊರಟ ಮೆರವಣಿಗೆಯು ದೊಡ್ಡ ಗಡಿಯಾರ, ಗಾಂಧಿ ಚೌಕ, ಚಿಕ್ಕ ಗಡಿಯಾರದ ಮೂಲಕ ದೇವರಾಜ ಅರಸು ರಸ್ತೆಯಲ್ಲಿ ಸಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಸಂಘಟನೆಯು ತಂಬಾಕು ಸೇವನೆಯಿಂದ ಉಂಟಾಗಬಹುದಾದ ದುಷ್ಪರಿಣಾಮ ಕುರಿತಂತೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ನಗರ ಹಾಗೂ ಗ್ರಾಮಾಂತರ ಬಸ್ ನಿಲ್ದಾಣ ಹಾಗೂ ರೇಲ್ವೆ ನಿಲ್ದಾಣಗಳ ಬಳಿ ಬೃಹತ್ ಭಿತ್ತಿಪತ್ರಗಳನ್ನು ಹಾಕಲಾಯಿತು.
ಸಂಘಟನೆ ನೇತೃತ್ವ ವಹಿಸಿದ್ದ ಡಾ. ಭರತ್, ಡಾ. ಮಂಜುನಾಥ್, ಡಾ. ಪ್ರಶಾಂತ್ ಹಾಗೂ ಡಾ. ಶಿವಾನಂದ್ ಇದ್ದರು.