10ರಂದು ತಾಪಂ ಸಭೆ
ಕೆ.ಆರ್. ನಗರ: ಇಲ್ಲಿನ ತಾಪಂ ಸಾಮಾನ್ಯ ಸಭೆಯು ಜೂ. 10ರ ಬೆಳಿಗ್ಗೆ 11ಕ್ಕೆ ತಾಪಂ ಸಭಾಂಗಣದಲ್ಲಿ ಅಧ್ಯಕ್ಷೆ ಕವಿತಾ ರವಿಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ತಾಪಂ ಕಾರ್ಯನಿರ್ವಣಾಧಿಕಾರಿ ಕೆ. ಬಸವರಾಜು ಹೇಳಿದ್ದಾರೆ.
ಚುಂಚನಕಟ್ಟೆಯಲ್ಲಿ ಸಿಜಿಬಿ ಶಾಖೆ
ಕೆ.ಆರ್. ನಗರ: ತಾಲೂಕಿನ ಚುಂಚಕಟ್ಟೆಯಲ್ಲಿ ಕಾವೇರಿ ಗ್ರಾಮೀಣ ಬ್ಯಾಂಕಿನ ನೂತನ ಶಾಖೆ ಜೂ. 12 ರಿಂದ ಕಾರ್ಯಾರಂಭ ಮಾಡಲಿದ್ದು, ಸಾರ್ವಜನಿಕರು ಹೆಚ್ಚಿನ ಪ್ರಮಾಣದಲ್ಲಿ ಅನುಕೂಲ ಪಡೆದುಕೊಳ್ಳಬೇಕೆಂದು ಕೋರಲಾಗಿದೆ.
10ರಂದು ಗ್ರಂಥಾಲಯ ಮೇಲ್ವಿಚಾರಕರ ಸಭೆ
ಕೆ.ಆರ್. ನಗರ: ಗ್ರಾಪಂ ಗ್ರಂಥಾಲಯಗಳ ಮೇಲ್ವಿಚಾರಕರ ಜಿಲ್ಲಾ ಮಟ್ಟದ ಸಭೆಯು ಜೂ. 10 ರಂದು ನಂಜನಗೂಡಿನ ಶಂಕರಮಠದ ಸಮೀಪವಿರುವ ಶ್ರೀಕಂಠೇಶ್ವರ ಸಮುದಾಯ ಭವನ ಕಲ್ಯಾಣ ಭವನದಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಹದೇವ ಹೇಳಿದ್ದಾರೆ. ಅಂದಿನ ಸಭೆಯಲ್ಲಿ ಸದಸ್ಯರ ಸಮಸ್ಯೆಗಳು ಮತ್ತು ಬೇಡಿಕೆಗಳ ಬಗ್ಗೆ ಚರ್ಚಿಸಲಾಗುತ್ತದೆ ಹಾಗೂ ಸಂಘದ ರಾಜ್ಯಾಧ್ಯಕ್ಷರಿಗೆ ಸನ್ಮಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ದೇವರಾಜ ಅರಸು ಪುಣ್ಯತಿಥಿ
ಹುಣಸೂರು: ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 31ನೇ ವರ್ಷದ ಪುಣ್ಯತಿಥಿ ಅಂಗವಾಗಿ ಗುರುವಾರ ಕಾಂಗ್ರೆಸ್ ಕಾರ್ಯಕರ್ತರು ಎಪಿಎಂಸಿ ಆವರಣದಲ್ಲಿರುವ ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪೂಜೆ ಸಲ್ಲಿಸಿದರು. ಪುರಸಭೆ ಸದಸ್ಯರಾದ ಶಿವರಾಜು, ಯೋಗಾನಂದ, ನರಸಯ್ಯ, ಶಿವಕುಮಾರ್, ಮುಖಂಡರಾದ ಶ್ರೀನಿವಾಸ್, ಪರಮೇಶ್, ಬಸವರಾಜು ಇದ್ದರು.
8ರಂದು ಜೆಡಿಎಸ್ ಕೃತಜ್ಞತಾ ಸಭೆ
ನಂಜನಗೂಡು: ಜೆಡಿಎಸ್ ಕಾರ್ಯಕರ್ತರ ಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಬೆಂಬಲಿಸಿದ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಹಿನ್ನೆಲೆ ಜೂ.8ರ ಬೆಳಿಗ್ಗೆ 11ಕ್ಕೆ ಯಾತ್ರಿಭವನ್ ಸಭೆ ಆಯೋಜಿಸಿದೆ. ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜೆಡಿಎಸ್ ತಾ. ಅಧ್ಯಕ್ಷ ಕಳಲೆ ಕೇಶವಮೂರ್ತಿ ಕೋರಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.