ಶಿಕ್ಷಕರ ವರ್ಗಕ್ಕೆ ಮಾರ್ಗಸೂಚಿ ಪ್ರಕಟ
ಮೈಸೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ವರ್ಗಾವಣೆಗೆ ಸಂಬಂಧಿಸಿದಂತೆ ಇಲಾಖೆಯಿಂದ ಮಾರ್ಗಸೂಚಿ ಪ್ರಕಟಿಸಿದ್ದು, ವರ್ಗಾವಣೆ ಬಯಸುವ ಶಿಕ್ಷಕರು ಆನ್ಲೈನ್ ಮೂಲಕ ಇಲಾಖೆ ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದು. ಭರ್ತಿ ಮಾಡಿದ ಅರ್ಜಿಯ ಮುದ್ರಿತ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಿ ಸ್ವೀಕೃತಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್ಸೈಟ್ ಢಿಢಿಢಿ.ಝ್ಛ್ಟ್ಟಟಜಜ್ಡ್ಛಛಡ್ಝ್ಟಿಟಿ.್ಞಛ್ಠ.ಟ್ಝ್ಛಿ.್ಝಟಿ ಹಾಗೂ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪಡೆಯಬಹುದು. ವರ್ಗಾವಣೆ ಕೋರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದ ಅಂತರ್ಜಾಲದ ಮೂಲಕ ಜೂ. 12 ರವರೆಗೆ ಅರ್ಜಿ ಸಲ್ಲಿಸುವ ಅವಧಿ. ಅರ್ಜಿ ಸಲ್ಲಿಸಿರುವ ಶಿಕ್ಷಕರು ಆಯಾ ಬ್ಲಾಕ್ನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಹಾಜರಾಗಿ ಅಗತ್ಯ ದಾಖಲೆ ನೀಡಿ ವರ್ಗಾವಣೆ ಅರ್ಜಿ ಸಲ್ಲಿಸಿರುವುದಕ್ಕೆ ಸ್ವೀಕೃತಿ ಪಡೆಯಲು ನಿಗದಿಪಡಿಸಿದ ಅವಧಿ ಜೂ. 13.
ಗ್ರಂಥಪಾಲಕ ಆತ್ಮಹತ್ಯೆ
ಮೈಸೂರು: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮರಾಠ ಕಾಲೋನಿಯಲ್ಲಿ ನಡೆದಿದೆ. ಖಾಸಗಿ ಕಾಲೇಜಿನಲ್ಲಿ ಗ್ರಂಥಪಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆನಂದ್ ಆತ್ಮಹತ್ಯೆ ಮಾಡಿಕೊಂಡವರು. ಈ ಸಂಬಂಧ ಎನ್.ಆರ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅವಧಿ ವಿಸ್ತರಣೆ
ಮೈಸೂರು: ಸರ್ಕಾರಿ ಕೈಗಾರಿಕಾ ತರಬೇತಿ 2013- 14ನೇ ಸಾಲಿನ ಐಟಿಐ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನಾ ಅವಧಿಯನ್ನು ಜೂ. 10 ರವರೆಗೆ ವಿಸ್ತರಿಸಿದೆ.