ಪಿರಿಯಾಪಟ್ಟಣ ಅಭಿವೃದ್ಧಿಗೆ ಕ್ರಮ: ವೆಂಕಟೇಶ್
ಕ.ಪ್ರ.ವಾರ್ತೆ ಪಿರಿಯಾಪಟ್ಟಣ ಜೂ. 8
ರಾಜ್ಯದಲ್ಲಿ ತಮ್ಮದೇ ಸರ್ಕಾರ ಇರುವುದರಿಂದ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿ ಕಾರ್ಯಗತಗೊಳಿಸುವುದಾಗಿ ಶಾಸಕ ಕೆ. ವೆಂಕಟೇಶ್ ಹೇಳಿದರು.
ಶಾಸಕರಾಗಿ 5ನೇ ಬಾರಿಗೆ ಆಯ್ಕೆಯಾಗಿ ಪ್ರಮಾಣವಚನ ಸ್ವೀಕರಿಸಿ ಪಟ್ಟಣಕ್ಕೆ ಪ್ರಥಮ ಬಾರಿಗೆ ಆಗಮಿಸಿದಾಗ ಕಾಂಗ್ರೆಸ್ ಕಾರ್ಯಕರ್ತರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. ನಂತರ ಅವರು ಮಾತನಾಡಿ, ಕಳೆದ ಬಾರಿ ತಾವು ಪ್ರತಿಪಕ್ಷದ ಶಾಸಕರಾಗಿದ್ದರೂ ಶಕ್ತಿಮೀರಿ ಕ್ಷೇತ್ರದ ಅಭಿವೃದ್ಧಿ ಮಾಡಿದ್ದು, ಈ ಬಾರಿ ತಮ್ಮದೇ ಪಕ್ಷ ಆಡಳಿತದಲ್ಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರದಲ್ಲಿರುವುದರಿಂದ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.
ಟಿಎಪಿಸಿಎಂಎಸ್ ಅಧ್ಯಕ್ಷ ಪುಟ್ಟರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾನ್ಸೂನ್ಚಂದ್ರು, ಮುಖಂಡರಾದ ಪಿ.ಸಿ. ಕೃಷ್ಣ, ವಾಸುದೇವ್, ಚೌತಿ ದೇವರಾಜ್ ಇದ್ದರು.