ಹಾರೋಹಳ್ಳಿಯಲ್ಲಿ ಆರೋಗ್ಯ ಜಾಥಾ
ಕ.ಪ್ರ.ವಾರ್ತೆ ಮೈಸೂರು ಜೂ. 9
ತಾಲೂಕಿನ ಹಾರೋಹಳ್ಳಿಯ ಸ್ವಯಂ ಜ್ಯೋತಿ ಯುವಕರ ಸಂಘದ ಪದಾಧಿಕಾರಿಗಳು ಆರೋಗ್ಯ ಜಾಥಾ ನಡೆಸಿದರು.
ಡೆಂಘೀ ಮತ್ತು ಚಿಕೂನ್ಗುನ್ಯಾ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಜಾಥಾ ನಡೆಸಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಈ ರೋಗ ತಡೆಗಟ್ಟಲು ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಿಳಿಸಿಕೊಡಲಾಯಿತು. ನೀರಿನ ತೊಟ್ಟಿಯನ್ನು ಆಗಾಗ್ಗೆ ಶುಚಿಗೊಳಿಸಿ ನೀರು ತುಂಬಿಡಬೇಕು. ನೀರಿನಲ್ಲಿ ಸೊಳ್ಳೆ ಉತ್ಪತ್ತಿ ಆಗದಂತೆ ನೋಡಿಕೊಳ್ಳಬೇಕು ಎಂದು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಟ್ಟರು. ಸಂಘದ ಪದಾಧಿಕಾರಿಗಳು, ಗ್ರಾಮದ ಮುಖಂಡರು, ಆಶಾ ಕಾರ್ಯಕರ್ತೆಯರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.