ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಸರ್ಕಾರಿ ಸವಲತ್ತು ಸದ್ಬಳಕೆಯಾಗಲಿ: ರವಿನಾಯಕ

Rashmi Kasaragodu
Updated On : 11 Jun 2013, 12:24 pm

ಕ.ಪ್ರ.ವಾರ್ತೆ   ಪಿರಿಯಾಪಟ್ಟಣ   ಜೂ. 10
ಸರ್ಕಾರದ ವತಿಯಿಂದ ಸಿಗುವ ಸವಲತ್ತು ಹಾಗೂ ಸೇವೆಗಳನ್ನು ಸಾರ್ವಜನಿಕರು ಸಮರ್ಪಕವಾಗಿ ಬಳಸಿಕೊಳ್ಳುವಂತೆ ತಾಪಂ ಅಧ್ಯಕ್ಷ ರವಿನಾಯಕ ಹೇಳಿದರು.
ಪಟ್ಟಣದ ಪೇಟೆ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸರ್ವಶಿಕ್ಷಣ ಅಭಿಯಾನದಡಿ ವಿಶೇಷ ಅಗತ್ಯತೆವುಳ್ಳ ಮಕ್ಕಳ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿ, ವಿಶೇಷ ಅಗತ್ಯತೆವುಳ್ಳ ಮಕ್ಕಳೂ ಇತರೆ ಮಕ್ಕಳಂತೆ ಬದುಕು ನಡೆಸಬೇಕು ಈ ನಿಟ್ಟಿನಲ್ಲಿ ಸರ್ಕಾರ ಹಲವಾರು ಯೋಜನೆಗಳನ್ನು ವಿಶೇಷ ಅಗತ್ಯತೆವುಳ್ಳ ಮಕ್ಕಳಿಗಾಗಿ ರೂಪಿಸಿದ್ದು, ಇದರ ಸೌಲಭ್ಯವನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಮನವಿ ಮಾಡಿದರು.
ಸರ್ವಶಿಕ್ಷಣ ಅಭಿಯಾನದ ಸಹಾಯಕ ಯೋಜನಾ ಸಮನ್ವಯಾಧಿಕಾರಿ ಎಂ.ವಿ. ನಿರ್ಮಲ ಮಾತನಾಡಿ, ತಾಲೂಕಿನಲ್ಲಿ 456 ವಿಶೇಷ ಅಗತ್ಯತೆವುಳ್ಳ ಮಕ್ಕಳನ್ನು ಗುರುತಿಸಲಾಗಿದ್ದು, ಅವರಿಗಾಗಿ ವೈದ್ಯಕೀಯ ತಪಾಸಣಾ ಶಿಬಿರ ಏರ್ಪಡಿಸಿ ಅಗತ್ಯ ಪರಿಕರಗಳನ್ನು ಸರ್ಕಾರದ ವತಿಯಿಂದ ವಿತರಿಸಲಾಗುತ್ತಿದೆ ಎಂದರು.
ಬೆಂಗಳೂರಿನ ಸ್ಕಂದ ಮೆಡಿಕಲ್ ಸೇವಾ ಟ್ರಸ್ಟ್, ಮೈಸೂರಿನ ಕೆ.ಆರ್. ಆಸ್ಪತ್ರೆ ಹಾಗೂ ತಾಲೂಕು ವೈದ್ಯಾಧಿಕಾರಿಗಳ ಕಚೇರಿ ವತಿಯಿಂದ 10 ಕ್ಕೂ ಹೆಚ್ಚು ನುರಿತ ವೈದ್ಯರು ತಪಾಸಣೆ ನಡೆಸಿದರು.
ತಾಪಂ ಉಪಾಧ್ಯಕ್ಷ ಯೋಗೇಶ್, ತಾಲೂಕು ವೈದ್ಯಾಧಿಕಾರಿ ಡಾ. ಶಶಿಕಲಾ, ಬಿಇಒ ರಾಮಲಿಂಗು, ಪತ್ರಕರ್ತ ಕಂಪಲಾಪುರ ಮೋಹನ್, ಶಿಕ್ಷಕರ ಪತ್ತಿನ ಸಹಕಾರ ಸಂಘದ ತಾ ಅಧ್ಯಕ್ಷ ನಾರಾಯಣ, ಸಿಆರ್ಪಿ ಶ್ರೀಕಾಂತ್, ಮುಖ್ಯ ಶಿಕ್ಷಕ ತಾಂಡವಮೂರ್ತಾಚಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement