ಪೆಟ್ಟಿಗೆ ಅಂಗಡಿಗೆ ಬೆಂಕಿ
ಕ.ಪ್ರ.ವಾರ್ತೆ ಮೈಸೂರು ಜೂ. 11
ಗ್ಯಾಸ್ ಸೋರಿಕೆಯಿಂದ ಪೆಟ್ಟಿಗೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಸಾವಿರಾರು ರು. ಮೌಲ್ಯದ ವಸ್ತುಗಳು ಸುಟ್ಟು ಹೋಗಿರುವ ಘಟನೆ ಮಂಗಳವಾರ ನಡೆದಿದೆ. ಅಗ್ರಹಾರ 101 ಗಣಪತಿ ದೇವಸ್ಥಾನದ ಬಳಿಯ ಪೆಟ್ಟಿಗೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.