ಆರೋಗ್ಯ ತಪಾಸಣೆ
ಎಚ್.ಡಿ. ಕೋಟೆ: ಶಿಕ್ಷಣ ಇಲಾಖೆ ಮತ್ತು ಸರ್ವ ಶಿಕ್ಷಣ ಅಭಿಯಾನದ ಆಶ್ರಯದಲ್ಲಿ ಅಂಗವಿಕಲ ಮಕ್ಕಳ ವೈದ್ಯಕೀಯ ತಪಾಸಣಾ ಶಿಬಿರ ಬುಧವಾರ ಇಲ್ಲಿನ ಗುರುಭವನದಲ್ಲಿ ನಡೆಯಿತು. ತಾಪಂ ಉಪಾಧ್ಯಕ್ಷ ಮಹೇಂದ್ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅಂಗವಿಕಲ ಮಕ್ಕಳ ಉಚಿತ ವೈದ್ಯಕೀಯ ತಪಾಸಣೆಯನ್ನು ಸರ್ಕಾರವು ನಡೆಸುತ್ತಿದ್ದು, ಅಂತಹ ಮಕ್ಕಳಿಗೆ ಅನುಕಂಪವನ್ನು ತೋರಿಸುವುದಕ್ಕೆ ಬದಲಾಗಿ ಪ್ರತಿಯೊಬ್ಬರೂ ಅವಕಾಶವನ್ನು ಕಲ್ಪಿಸಿಕೊಟ್ಟು ಮುಖ್ಯವಾಹಿನಿಗೆ ತರಬೇಕು ಎಂಬುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದರು. ಕ್ಷೇತ್ರ ಸಮನ್ವಯಾಧಿಕಾರಿ ರಂಗಸ್ವಾಮಿಶೆಟ್ಟಿ ಮಾತನಾಡಿದರು. ಇದೇ ವೇಳೆ ಸ್ಕಂದ ಸಂಸ್ಥೆಯವರು ಉಚಿತವಾಗಿ ಅಂಗವಿಕಲ ಮಕ್ಕಳಿಗೆ ಸಲಕರಣೆ ವಿತರಿಸಿದರು. ಜಿಪಂ ಸದಸ್ಯ ಚಿಕ್ಕಣ್ಣೇಗೌಡ, ಉಪ ಸಮನ್ವಯಾಧಿಕಾರಿ ನಿರ್ಮಲ, ಶಿಕ್ಷಣ ಇಲಾಖೆಯ ಚಿಕ್ಕನಾಯಕ, ಹೆಳವನಾಯಕ, ಇರ್ಷದ್ ಅಹಮದ್, ನಿಂಗರಾಜು, ಸರಗೂರು ಪಟ್ಟಣದ ವಿವೇಕಾನಂದ ಆಸ್ಪತ್ರೆಯ ವೈದ್ಯರು, ಸಿಆರ್ಪಿ ಹಾಗೂ ಪೋಷಕರು ಭಾಗವಹಿಸಿದ್ದರು.
ಅರ್ಜಿ ಆಹ್ವಾನ
ಟಿ. ನರಸೀಪುರ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ 2013- 14ನೇ ಸಾಲಿನ ಉದ್ಯೋಗಿನಿ ಯೋಜನೆಯಡಿ ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದವರಿಗೆ ಸಾಲ ಮತ್ತು ಸಹಾಯಧನ ನೀಡಲಾಗುವುದು. ಅರ್ಜಿಯನ್ನು ಟಿ. ನರಸೀಪುರ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಜೂ. 25ರವರೆಗೆ ವಿತರಿಸಲಾಗುತ್ತದೆ. ಅರ್ಜಿಯನ್ನು ಟಿ. ನರಸೀಪುರದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗೆ ಜು. 5ರ ಸಂಜೆ 5 ರೊಳಗೆ ಸಲ್ಲಿಸಬೇಕು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.