ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಕನ್ನಡ ಮಾಧ್ಯಮ ಬಗ್ಗೆ ಕೀಳರಿಮೆ ಸಲ್ಲ

Rashmi Kasaragodu
Updated On : 14 Jun 2013, 10:59 am

ಕ.ಪ್ರ.ವಾರ್ತೆ   ಮೈಸೂರು   ಜೂ. 14
ಕನ್ನಡ ಮಾಧ್ಯಮದ ಕಲಿಕೆಗೆ ಯಾವುದೇ ಕೀಳರಿಮೆ ಸಲ್ಲದು ಎಂದು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಕುವೆಂಪುನಗರ ಶಾಖೆಯ ಮುಖ್ಯ ವ್ಯವಸ್ಥಾಪಕ ಗೌರೀಶ್ ಎಂ. ಕಾಯ್ಕಿಣಿ ಹೇಳಿದರು.
ರಾಮಕೃಷ್ಣನಗರದ ನೃಪತುಂಗ ಕನ್ನಡ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬ್ಯಾಂಕಿನ ವತಿಯಿಂದ ನೀಡಲಾದ ವಿದ್ಯುತ್ ಪಂಕಾಗಳಿಗೆ (ಫ್ಯಾನ್) ಚಾಲನೆ ನೀಡಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಸ.ರ. ಸುದರ್ಶನ, ಕೇವಲ ಇಂಗ್ಲಿಷ್ ಶಾಲೆಗಳು ಮಾತ್ರವೇ ವಾಹನ ಮತ್ತಿತರ ಸೌಲಭ್ಯಗಳನ್ನು ಹೊಂದಿರುವ ಶ್ರೀಮಂತ ಶಾಲೆ ಎಂದು ಭಾವಿಸಬಾರದು ಎಂದರು.
ನೂತನ ಶಾಲಾ ವಾಹನಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಕೆ. ಬಸವರಾಜು ಕನ್ನಡ ಬಾವುಟ ತೋರಿಸಿ ಚಾಲನೆ ನೀಡಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಎಂ.ಬಿ. ವಿಶ್ವನಾಥ್, ಸಂಸ್ಥೆಯ ಕಾರ್ಯದರ್ಶಿಗಳಾದ ಬಿ. ಸೋಮಶೇಖರಪ್ಪ, ನಾ. ನಾಗಚಂದ್ರ ಹಾಗೂ ಅ.ರಾ. ರಾಮು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement