ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ನೇಮಕಾತಿ ವಿರೋಧಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ

Mainashree
Updated On : 20 Jun 2013, 12:13 pm

ಕ.ಪ್ರ.ವಾರ್ತೆ  ಮೈಸೂರು  ಜೂ. 19
ಆನ್‌ಲೈನ್ ಮೂಲಕ ಅತಿಥಿ ಉಪನ್ಯಾಸಕರ ನೇಮಕಾತಿ ವಿರೋಧಿಸಿ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಂಘದ ಪದಾಧಿಕಾರಿಗಳು ಕಾಲೇಜು ಶಿಕ್ಷಣ ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿ ಎದುರು ಮಂಗಳವಾರ ಪ್ರತಿಭಟಿಸಿದರು.
ಸರ್ಕಾರಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನೇ ನೇರವಾಗಿ ನೇಮಕಾತಿ ಮಾಡಿಕೊಳ್ಳಬೇಕು. ಆನ್‌ಲೈನ್ ಮೂಲಕ ನೇಮಕಾತಿ ಮಾಡುತ್ತಿರುವ ಕ್ರಮ ಸರಿಯಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಈ ವೇಳೆ ಸಂಘದ ಅಧ್ಯಕ್ಷ ಪ್ರದೀಪ್‌ಕುಮಾರ್ ಮಾತನಾಡಿ, ಹಿಂದಿನ ವರ್ಷಗಳಲ್ಲಿ ಸರ್ಕಾರ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯಲ್ಲಿ ವರ್ಷಕ್ಕೆ ಐದು ಅಂಕ ನೀಡುತ್ತಿದ್ದು, ಅದನ್ನು 2012-13ನೇ ಸಾಲಿನಲ್ಲಿ ನಾಲ್ಕು ಅಂಕಗಳಿಗೂ, ಈಗ ಮೂರು ಅಂಕಗಳಿಗೂ ಇಳಿಸುವ ಮೂಲಕ ನಮ್ಮ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿದೆ ಎಂದು ದೂರಿದರು.
ಮಹಾರಾಣಿ ಕಾಲೇಜಿನಲ್ಲಿ 43 ಮಂದಿ ಅತಿಥಿ ಉಪನ್ಯಾಸಕರಿಗೆ ಕಳೆದ 6 ತಿಂಗಳಿಂದ ಗೌರವಧನ ನೀಡಿಲ್ಲ. ಯುಜಿಸಿ ನಿಯಮಾವಳಿಯಲ್ಲಿ ಅತಿಥಿ ಉಪನ್ಯಾಸಕರಿಗೆ 25 ಸಾವಿರ ರು. ಗೌರವಧನ ನೀಡಬೇಕು ಎಂಬ ನಿಯಮ ಇದ್ದರೂ ಅದನ್ನು ಉಲ್ಲಂಘಿಸಿ ಕಡಿಮೆ ಗೌರವಧನ ನೀಡಲಾಗುತ್ತಿದೆ. ಆದ್ದರಿಂದ ಕನಿಷ್ಠ 15 ಸಾವಿರ ರು.ಗಳನ್ನಾದರೂ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.
ಎಂಎ, ಎಂಫಿಲ್ ಮಾಡಿರುವ ಅತಿಥಿ ಉಪನ್ಯಾಸಕರಿಗೆ ಎಂಎ, ಪಿಎಚ್‌ಡಿ ಮಾಡಿರುವ ಉಪನ್ಯಾಸಕರಿಗಿಂತ ಕಡಿಮೆ ವೇತನ ನೀಡಲಾಗುತ್ತಿದೆ. ಇದರಿಂದ ಅತಿಥಿ ಉಪನ್ಯಾಸಕರು ಜೀವನ ನಡೆಸುವುದೆ ಕಷ್ಟವಾಗುತ್ತಿದೆ ಎಂದು ಆರೋಪಿಸಿದರು.
ಸಂಘದ ಸಂಘಟನಾ ಸಂಯೋಜಕ ಹನುಮಂತೇಶ್, ಸಹ ಕಾರ್ಯದರ್ಶಿ ಡಿ.ಆರ್. ದಿವ್ಯಾ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement