ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಮರಳು ಮುಷ್ಕರಕ್ಕೆ ಬೆಂಬಲ ಇಲ್ಲ: ಸ್ಪಷ್ಟನೆ

Mainashree
Updated On : 20 Jun 2013, 12:08 pm

ಮೈಸೂರು: ಜಿಲ್ಲಾಡಳಿತವನ್ನು ಬ್ಲಾಕ್ಮೇಲ್ ಮಾಡಲು ಹೊರಟಿರುವ ಮೈಸೂರು ನಗರ ಸ್ಥಳೀಯ ಲಾರಿ ಮಾಲೀಕರ ಸಂಘದ ಯಾವುದೇ ಮುಷ್ಕರಗಳಿಗೆ ಸಹಕರಿಸುವುದಿಲ್ಲ ಎಂದು ಮೈಸೂರು ಜಿಲ್ಲಾ ಗ್ರಾಮಾಂತರ ಕಟ್ಟಡ ಸಾಮಗ್ರಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಎಸ್. ಲಿಂಗರಾಜು, ಕಾರ್ಯದರ್ಶಿ ಅಸ್ಗರ್ ಅಹಮ್ಮದ್ ಸ್ಪಷ್ಟಪಡಿಸಿದ್ದಾರೆ.
ಅಕ್ರಮ ಮರಳು ಗಣಿಗಾರಿಕೆ ಹಾಗೂ ಕಳ್ಳ ಸಾಗಾಣಿಕೆ ವಿರುದ್ಧ ತೆಗೆದುಕೊಳ್ಳುತ್ತಿರುವ ಕ್ರಮಗಳ ವಿರುದ್ಧ ಹೋರಾಟ ನಡೆಸಲು ಆ ಸಂಘದವರು ನಮ್ಮ ಸಹಕಾರ ಕೋರಿದ್ದನ್ನು ತಿರಸ್ಕರಿಸಿದ್ದೇವೆ. ಜಿಲ್ಲಾಧಿಕಾರಿಯವರು ಅಕ್ರಮ ಮರಳು ದಂಧೆ ವಿರುದ್ಧ ತೆಗೆದುಕೊಳ್ಳುವ ಎಲ್ಲ ನಿರ್ಧಾರಗಳಿಗೆ ನಮ್ಮ ಸಂಘವು ಸಂಪೂರ್ಣವಾಗಿ ಸಹಕರಿಸಲಿದೆ. ಕೆಲವು ದಿನಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ. ಹೀಗಾಗಿ, ಅನಧಿಕೃತ ಮುಷ್ಕರಗಳಲ್ಲಿ ಭಾಗವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement