ಅವಿವಾಹಿತರು, ವಿಚ್ಛೇದಿತ ಸ್ತ್ರೀಯರಿಗೆ ಮಾಸಾಶನ
ಮೈಸೂರು: 40 ವರ್ಷ ಮೀರಿದ ಅವಿವಾಹಿತ ಮಹಿಳೆಯರಿಗೆ ಮತ್ತು ಬಿಪಿಎಲ್ ಪಡಿತರ ಚೀಟಿ ಹೊಂದಿರುವ ವಿಚ್ಚೇದಿತ ಮಹಿಳೆಯರಿಗೆ ಮಾಸಾಶನ ನೀಡಲು ಸಂಬಂಧಿಸಿದಂತೆ ಚರ್ಚಿಸಿ, ಬಜೆಟ್ನಲ್ಲಿ ಪ್ರಕಟಿಸಲಾಗುವುದು ಎಂದು ಕಂದಾಯ ಸಚಿವ ವಿ.ಶ್ರೀನಿವಾಸಪ್ರಸಾದ್ ಹೇಳಿದರು.
ಕಾಡಾ ಕಚೇರಿ ಸಮುಚ್ಚಯದಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇದರಿಂದ ಸರ್ಕಾರಕ್ಕೆ 10 ಕೋಟಿ ಹೊರೆಯಾಗಬಹುದಷ್ಟೆ ಎಂದರು.
ಈಗಾಗಲೇ ಪಿಂಚಣಿ ಅದಾಲತ್ ಆರಂಭಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಿಂಚಣಿಗೆ ಸಂಬಂಧಿಸಿದಂತೆ ಈ ಮುಂಚೆ ಕೇವಲ ಸ್ಥಳೀಯ ಅಧಿಕಾರಿಗಳು ತೀರ್ಮಾನ ಕೈಗೊಳ್ಳುತ್ತಿದ್ದರು. ಆದರೆ ಈಗ ತಿಂಗಳ 15 ದಿನ ಜಿಲ್ಲಾಧಿಕಾರಿಗಳು ಮತ್ತು ಉಪ ವಿಭಾಗಾಧಿಕಾರಿಗಳು ಈ ಅದಾಲತ್ನಲ್ಲಿ ಭಾಗವಹಿಸಿ, ಸ್ಥಳೀಯ ಮಟ್ಟದ ಸಮಸ್ಯೆ ಬಗೆಹರಿಸಬೇಕು ಎಂದರು.