ವೈದ್ಯರ ಭದ್ರತೆಗೆ ಆಗ್ರಹಿಸಿ ಮನವಿ
ಮೈಸೂರು: ಸರ್ಕಾರಿ ಮತ್ತು ಖಾಸಗಿ ವೈದ್ಯರು ಮತ್ತು ವೈದ್ಯ ವೃತ್ತಿಯಲ್ಲಿ ತೊಡಗಿರುವ ಎಲ್ಲಾ ಸಿಬ್ಬಂದಿಗೆ ಭದ್ರತೆ ಒದಗಿಸುವಂತೆ ಒತ್ತಾಯಿಸಿ ವೈದ್ಯಾಧಿಕಾರಿಗಳು ಜಿಲ್ಲಾಧಿಕಾರಿ ಡಾ.ರಾಮೇಗೌಡ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘದ ಮೈಸೂರು ಘಟಕದ ಅಧ್ಯಕ್ಷ ಮತ್ತು ವೈದ್ಯರ ಸಂಘ ಸಂಸ್ಥೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಡಾ.ಸಿ. ಶರತ್ಕುಮಾರ್ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.