ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

19 ಸಾವಿರ ಲೀ. ಹಾಲು ಮಣ್ಣುಪಾಲು

Rashmi Kasaragodu
Updated On : 23 Jun 2013, 12:21 pm

ಕ.ಪ್ರ.ವಾರ್ತೆ   ಹುಣಸೂರು   ಜೂ.22
ಹಾಲಿನ ಟ್ಯಾಂಕರ್ವೊಂದು ಪಲ್ಟಿ ಹೊಡೆದ ಪರಿಣಾಮ 19 ಸಾವಿರ ಲೀಟರ್ ಹಾಲು ಮಣ್ಣು ಪಾಲಾದ ಘಟನೆ ಶನಿವಾರ ಬೆಳಗಿನ ಜಾವ ಹುಣಸೂರು- ಕೆ.ಆರ್. ನಗರ ಮುಖ್ಯ ರಸ್ತೆಯ ಕಟ್ಟೆಮಳಲವಾಡಿ ತಿರುವಿನಲ್ಲಿ ಜರುಗಿದೆ.
ಹುಣಸೂರಿನಿಂದ ಚನ್ನರಾಯಪಟ್ಟಣಕ್ಕೆ ಪ್ರತಿನಿತ್ಯ ಸಾಗಿಸುತ್ತಿದ್ದ ಹಾಲಿನ ವಾಹನವು ತಿರುವಿನಲ್ಲಿ ಅತಿ ವೇಗವಾಗಿ ಬಂದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಚಾಲಕನಿಗೆ ತೀವ್ರ ಪೆಟ್ಟು ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಣಸೂರು-ಕೆ.ಆರ್. ನಗರ ಮುಖ್ಯರಸ್ತೆಯ ತಿರುವಿನಲ್ಲಿ ಹಲವಾರು ಬಾರಿ, ಸಾಕಷ್ಟು ಅಪಘಾತಗಳು ನಡೆಯುತ್ತಿದ್ದರೂ ಲೋಕಪಯೋಗಿ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಮೌನ ವಹಿಸಿದ್ದ ಪರಿಣಾಮ ಹಲವಾರು ಮಂದಿ ಪ್ರಾಣ ಕಳೆದುಕೊಳ್ಳಲು ಕಾರಣರಾಗಿದ್ದಾರೆ. ಅಧಿಕಾರಿಗಳು ಇನ್ನು ಮುಂದೆಯಾದರೂ ಇಂತಹ ಅನಾಹುತ ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement