ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಇಂಧನ ಸಂಶೋಧನೆ ಗುಣಮಟ್ಟ ಹೆಚ್ಚಲಿ: ಡಾ. ನಾಗರಾಜ ಆಶಯ

Rashmi Kasaragodu
Updated On : 24 Jun 2013, 12:43 pm

ಕ.ಪ್ರ.ವಾರ್ತೆ   ಮೈಸೂರು   ಜೂ. 23
ಪ್ರಸ್ತುತ ಇಂಧನ ಕ್ಷೇತ್ರದಲ್ಲಿ ಸಂಶೋಧನೆಗಳ ಗುಣಮಟ್ಟ ಹೆಚ್ಚಾಗಬೇಕಿದೆ ಎಂದು ಬೆಂಗಳೂರಿನ ಪವರ್ ರಿಸರ್ಚ್ ಆ್ಯಂಡ್ ಡೆವಲಪ್ಮೆಂಟ್ ಕನ್ಸಲ್ಟೆಂಟ್ಸ್ (ಪಿಆರ್ಡಿಸಿ) ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಆರ್. ನಾಗರಾಜ ಹೇಳಿದರು.
ಎನ್ಐಇ ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗವು ಶನಿವಾರ ಸ್ಮಾರ್ಟ್ ಗ್ರಿಡ್ ಆ್ಯಂಡ್ ಫ್ಯಾಕ್ಟ್ಸ್ ಕುರಿತು ಆಯೋಜಿಸಿದ್ದ ಮೂರು ದಿನಗಳ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಸೆಸ್ಕ್ ಎಂಜಿನಿಯರುಗಳು ಹೊಸ ಸಂಶೋಧನೆಗಳತ್ತ ಗಮನ ಹರಿಸಬೇಕು ಮತ್ತು ಅವುಗಳ ಸದುಪಯೋಗ ಮಾಡಿಕೊಳ್ಳಬೇಕು.
ಈ ಮೂಲಕ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡಬೇಕು. ಜೊತೆಗೆ ಹೊಸ ಆವಿಷ್ಕಾರ, ತಂತ್ರಜ್ಞಾನ ಬದಲಾವಣೆಗಳ ಬಗ್ಗೆ ತಿಳಿದುಕೊಳ್ಳಬೇಕು.
ನವೀಕರಿಸಬಹುದಾದ ಇಂಧನ ಮೂಲಗಳನ್ನು ಹೆಚ್ಚಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಎನ್ಐಇ ಗೌರವ ಕಾರ್ಯದರ್ಶಿ ಎಸ್.ಎಲ್. ರಾಮಚಂದ್ರ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಪ್ರಾಂಶುಪಾಲ ಡಾ.ಜಿ.ಎಲ್. ಶೇಖರ್, ಸಂಯೋಜಕರಾದ ಡಾ.ಎಚ್.ವಿ. ಸಾಯ್ಕುಮಾರ್, ಡಾ. ಬನ್ಸಿಲಾಲ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement