ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ: ಮಹದೇವ್

Rashmi Kasaragodu
Updated On : 24 Jun 2013, 12:43 pm

ಕ.ಪ್ರ.ವಾರ್ತೆ   ಮೈಸೂರು   ಜೂ. 23
ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ತ್ಯಜಿಸಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಎಂದು ಜಿಪಂ ಸದಸ್ಯ ಕೂರ್ಗಳ್ಳಿ ಮಹದೇವ್ ಹೇಳಿದರು.
ಚಾಮುಂಡೇಶ್ವರಿ ಕ್ಷೇತ್ರದ ಕಲ್ಲಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಲಯನ್ಸ್ ಕ್ಲಬ್ ಆಫ್ ಚಾಮುಂಡೇಶ್ವರಿ ಮತ್ತು ಲಯನ್ಸ್ ಕ್ಲಬ್ ಆಫ್ ವಿಜಯಶ್ರೀ ಏರ್ಪಡಿಸಿದ್ದ ಸಮಾರಂಭದಲ್ಲಿ ಶಾಲಾ ಮಕ್ಕಳಿಗೆ ಬಿಳಿ ಸಮವಸ್ತ್ರ ವಿತರಿಸಿ ಮಾತನಾಡಿ, ಮಕ್ಕಳಿಗೆ ಎಲ್ಲಾ ಸೌಲಭ್ಯಗಳು ದೊರೆಯುತ್ತಿದ್ದು, ಸರ್ಕಾರ ಕೋಟ್ಯಂತರ ರುಪಾಯಿ ಖರ್ಚು ಮಾಡುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ಲಯನ್ಸ್ ಕ್ಲಬ್ ಆಫ್ ಚಾಮುಂಡೇಶ್ವರಿ ಅಧ್ಯಕ್ಷೆ ನಾಗರತ್ನ ಮಹದೇವ್ ಮಾತನಾಡಿ, ಶಿಕ್ಷಕರು ಮಕ್ಕಳಿಗೆ ಅಕ್ಷರ ಕಲಿಸಿ ವಿದ್ಯಾದಾನ ಮಾಡಬೇಕು. ಕೆಲವೆಡೆ 7ನೇ ತರಗತಿ ಓದುತ್ತಿರುವ ಮಕ್ಕಳಿಗೂ ಓದಲು ಬರೆಯಲು ಬಾರದ ಸ್ಥಿತಿ ಕೆಲವು ಕಡೆ ನಿರ್ಮಾಣವಾಗಿದೆ ಎಂದರು.
ಲಯನ್ಸ್ ಕ್ಲಬ್ ಆಫ್ ವಿಜಯಶ್ರೀ ಅಧ್ಯಕ್ಷ ಎಚ್.ಸಿ. ರಾಜು ಮಾತನಾಡಿದರು. ಕೆ.ಡಿ. ಕಾರ್ಯಪ್ಪ, ದೇವಯ್ಯ ಲೋಕೇಶ್, ರವೀಂದ್ರ, ಹೊನ್ನಪ್ಪ, ಉದಯ್ ಗಿರೀಶ್ ಬಿದ್ದಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement