ಆಧುನಿಕ ಬೇಸಾಯ ಪದ್ಧತಿ ಅಳವಡಿಸಿಕೊಳ್ಳಲು ಕರೆ
ಪಿರಿಯಾಪಟ್ಟಣ: ಕೃಷಿ ಇಲಾಖೆ ವತಿಯಿಂದ ದೊರೆಯುವ ಕೃಷಿ ಪರಿಕರಗಳನ್ನು ಹಾಗೂ ಯಂತ್ರೋಪಕರಣಗಳನ್ನು ಬಳಸಿಕೊಂಡು, ವೈಜ್ಞಾನಿಕ ರೀತಿಯಲ್ಲಿ ಕೃಷಿ ಮಾಡಿದಾಗ ರೈತರು ಉತ್ತಮ ಬೆಳೆ ಬೆಳೆಯುವುದರೊಂದಿಗೆ ತಮ್ಮ ಆರ್ಥಿಕಮಟ್ಟ ಸುಧಾರಿಸಿಕೊಳ್ಳಬಹುದು ಎಂದು ತಾಪಂ ಸದಸ್ಯ ಶಂಕರೇಗೌಡ ಹೇಳಿದರು.
ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ಹೋಬಳಿ ಮಟ್ಟದ ಭೂಚೇತನ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಭೂ ಚೇತನ ಯೋಜನೆ ಮಣ್ಣಿನ ಫಲವತ್ತತೆ ಹೆಚ್ಚಿಸುವ ಪ್ರಮುಖ ಯೋಜನೆಯಾಗಿದ್ದು, ಇದರ ಸದುಪಯೋಗವನ್ನು ರೈತರು ತಮ್ಮ ಕೃಷಿ ಚಟುವಟಿಕೆಗಳಲ್ಲಿ ಬಳಸಿಕೊಳ್ಳುವಂತೆ ತಿಳಿಸಿದರು.
ಸಹಾಯಕ ಕೃಷಿ ನಿರ್ದೇಶಕ ಕೆ.ರಾಜು ಮಾತನಾಡಿದರು. ನಿವೃತ್ತ ಕೃಷಿ ಅಧಿಕಾರಿ ಚನ್ನಪ್ಪ ಮಣ್ಣಿನ ಫಲವತ್ತತೆ ಕಾಪಾಡುವ ಬಗ್ಗೆ ಹಾಗೂ ಪೋಷಕಾಂಶಗಳ ಬಗ್ಗೆ ಮಾಹಿತಿ ನೀಡಿದರು. ಮೈರಾಡ ಸಂಸ್ಥೆಯ ತರಬೇತಿದಾರ ಸದಾಶಿವ, ಮಂಜು, ಎ.ಜೆ. ಗಣೇಶ್, ದೀಪ್ತಿ ಪಾಟೀಲ್ ಇದ್ದರು.