ಪತ್ನಿ, ಮಗುವಿಗೆ ಬೆಂಕಿ ಹಚ್ಚಿ ಕೊಲೆ
ನಂಜನಗೂಡು: ವ್ಯಕ್ತಿಯೊಬ್ಬ ಪತ್ನಿ ಮತ್ತು ತನ್ನ ಮಗುವಿಗೆ ಬೆಂಕಿ ಹಚ್ಚಿ ಅಮಾನುಷವಾಗಿ ಹತ್ಯೆಗೈದ ಹೃದಯ ವಿದ್ರಾವಕ ಘಟನೆ ತಾಲೂಕಿನ ಇಮ್ಮಾವು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಚಿಕ್ಕಯ್ಯನ ಛತ್ರದಲ್ಲಿನ ರೀಡ್ ಆ್ಯಂಡ್ ಟೇಲರ್ ಕಾರ್ಖಾನೆ ನೌಕರ ಚೆಲುವರಾಜು ಎಂಬಾತ ಇಂಥ ಕೃತ್ಯವೆಸಗಿದವನು. ಈತನ ಪತ್ನಿ ಶ್ವೇತಾ ತೀವ್ರ ಸುಟ್ಟ ಗಾಯಗಳಿಂದಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಡಿ ಕೊನೆಯುಸಿರೆಳೆದರೆ, ಮೂರು ವರ್ಷದ ಮಗ ಶ್ರೇಯಸ್ ಸ್ಥಳದಲ್ಲಿಯೇ ಮೃತಪಟ್ಟಿತ್ತು. ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.