ಅತಿಯಾದ ರಾಸಾಯನಿಕ ಗೊಬ್ಬರ, ಕೀಟನಾಶಕ ಬಳಕೆಯಿಂದ ಪರಿಸರ ನಾಶ
ಕ.ಪ್ರ.ವಾರ್ತೆ , ಪಿರಿಯಾಪಟ್ಟಣ , ಜೂ. 29
ರಾಸಾಯನಿಕ ಗೊಬ್ಬರ ಹಾಗೂ ಕೀಟನಾಶಕಗಳ ಅತಿಯಾದ ಬಳಕೆಯಿಂದ ಪರಿಸರ ಹಾಳಾಗುತ್ತಿದ್ದು, ಮನುಷ್ಯನ ಆರೋಗ್ಯದ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಕೃಷಿ ಅಧಿಕಾರಿ ಸಂತೋಷ್ ಕುಮಾರ್ ಹೇಳಿದರು.
ತಾಲೂಕಿನ ನಾರಳಾಪುರ ಗ್ರಾಮದ ಬಸವೇಶ್ವರ ಸಾವಯವ ಕೃಷಿಕರ ಸಂಘದ ರೈತರಿಗೆ ಕೃಷಿ ಇಲಾಖೆ ಹಾಗೂ ಮಹಾತ್ಮಗಾಂಧಿ ಟ್ರಸ್ಟ್ ವತಿಯಿಂದ ಸಾವಯವ ಗೊಬ್ಬರ ಹಾಗೂ ಸಾವಯವ ಕೃಷಿ ಸಹಾಯಧನದ ಚೆಕ್ ವಿತರಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸಾವಯವ ಉತ್ಪನ್ನಗಳ ಬಳಕೆಯತ್ತ ಜನರು ಹೆಚ್ಚಿನ ಒಲವು ತೋರುತ್ತಿದ್ದು, ಸಾವಯವ ಆಹಾರ ಪದಾರ್ಥಗಳಿಗೆ ಉತ್ತಮ ಮಾರುಕಟ್ಟೆ ಇದೆ. ಇದರ ಮಹತ್ವ ತಿಳಿದು ರೈತರು ಸಾವಯವ ಕೃಷಿಯಲ್ಲಿ ಹೆಚ್ಚಿನ ಲಾಭ ಪಡೆಯಬಹುದು ಎಂದು ತಿಳಿಸಿದರು.
ಮಹಾತ್ಮಾಗಾಂಧಿ ಟ್ರಸ್ಟ್ನ ಕ್ಷೇತ್ರಾಧಿಕಾರಿ ಓಹಿಲೇಶ್ವರ್, ಬಸವೇಶ್ವರ ಸಾವಯವ ಕೃಷಿಕರ ಸಂಘದ ಅಧ್ಯಕ್ಷ ವಿಶ್ವನಾಥ್ ಇದ್ದರು.