ಅರಕೆರೆಯಲ್ಲಿ ಶೀಘ್ರ ಗೋಶಾಲೆ
ಭೇರ್ಯ: ಅತಿ ಶೀಘ್ರದಲ್ಲೆ ಭೇರ್ಯ ಸಮೀಪದ ಅರಕೆರೆ ಗ್ರಾಮದಲ್ಲಿ ಗೋಶಾಲೆ ಆರಂಭಿಸಲಾಗುವುದು ಎಂದು ಉಪತಹಸೀಲ್ದಾರ್ ಯಧುಗಿರೀಶ್ ಹೇಳಿದರು.
ಅರಕೆರೆ ಗ್ರಾಮಕ್ಕೆ ಭೇಟಿ ನೀಡಿ ಗೋಶಾಲೆ ಕಾಮಗಾರಿಯ ಸ್ಥಳ ಪರೀಶೀಲನೆ ಮಾಡಿ ಮಾತನಾಡಿದ ಅವರು, ಬರದ ಹಿನ್ನೆಲೆ ಸರ್ಕಾರ ತಾಲೂಕಿಗೆ ಗೋಶಾಲೆ ಆರಂಭಿಸಲು 20 ಲಕ್ಷ ಮಂಜೂರು ಮಾಡಿದೆ. ಜಾನುವಾರುಗಳಿಗೆ ಉಚಿತವಾಗಿ ಮೇವು ಮತ್ತು ಕುಡಿಯುವ ನೀರು ಒದಗಿಸಲು ಹೊಸ ಅಗ್ರಹಾರ ಹೋಬಳಿಯನ್ನು ಆಯ್ಕೆ ಮಾಡಿ, ಗೋಶಾಲೆ ತೆರೆಯಲು ಸೂಕ್ತ ಸ್ಥಳಕ್ಕಾಗಿ ಅರಕೆರೆ ಗ್ರಾಮವನ್ನು ಆಯ್ಕೆ ಮಾಡಿದ್ದೇವೆ ಎಂದು ತಿಳಿಸಿದರು.
ಮುಂದಿನ ವಾರದೊಳಗೆ ಕಾಮಗಾರಿ ಮುಗಿಯಲಿದ್ದು, ಜಾನುವಾರುಗಳನ್ನು ಗೋಶಾಲೆಗೆ ಬಿಡಲು ಎಲ್ಲಾ ರೈತರಿಗೆ ತಿಳಿಸಲಾಗುವುದು ಎಂದು ಹೇಳಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.