ಕರ್ತವ್ಯ ಲೋಪ: ಪಿಡಿಒ ಅಮಾನತು
ಕೆ.ಆರ್. ನಗರ: ಕರ್ತವ್ಯಲೋಪ ಮತ್ತು ಗ್ರಾಪಂ ಮಹಿಳಾ ಸದಸ್ಯರೊಂದಿಗೆ ಅಸಭ್ಯವಾಗಿ ವರ್ತಿಸಿದ ದೂರಿನ ಹಿನ್ನೆಲೆ ತಾಲೂಕಿನ ಡೋರ್ನಹಳ್ಳಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಪಿ. ಮಹೇಶ್ ಅವರನ್ನು ಅಮಾನತು ಮಾಡಲಾಗಿದೆ. ಈ ಹಿಂದೆ ಅಡಗೂರು ಗ್ರಾಪಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಸರ್ಕಾರದ ಹಣವನ್ನು ಸ್ವಂತಕ್ಕೆ ಬಳಕೆ ಮಾಡಿಕೊಂಡ ಆರೋಪ ಮತ್ತು ಡೋರ್ನಹಳ್ಳಿ ಗ್ರಾಪಂಯಲ್ಲಿ ಅಕ್ರಮವಾಗಿ ಎನ್ಒಸಿ ನೀಡಿ, ಪಂಚಾಯಿತಿಗೆ ಮಹಿಳಾ ಸದಸ್ಯರು ಭೇಟಿ ನೀಡಿದಾಗ ಅಸಭ್ಯವಾಗಿ ವರ್ತಿಸಿದ ದೂರಿನ ಹಿನ್ನೆಲೆ ಜಿಪಂ ಸಿಇಒ ಅಜಯ್ ನಾಗಭೂಷಣ್ ಈ ಕ್ರಮ ಕೈಗೊಂಡಿದ್ದಾರೆ.
ಇಂದಿರಾ ಅವಾಸ್ ಯೋಜನೆಯ ಫಲಾನುಭಾವಿಗಳು ಮನೆ ನಿರ್ಮಿಸಿಕೊಂಡಿದ್ದರೂ ಹಣ ನೀಡದೆ ಗ್ರಾಪಂ ಗಮನಕ್ಕೆ ತರದೆ ಅಕ್ರಮ ಖಾತೆ ಮಾಡಿಕೊಟ್ಟಿರುವ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ ಆಮಾನತು ಪಡಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.