ಪ್ರತ್ಯೇಕ ಪ್ರಕರಣ: ಇಬ್ಬರು ನಾಪತ್ತೆ
ಮೈಸೂರು: ಉದಯಗಿರಿ ನಿವಾಸಿ ಖಾದರ್ ಷರೀಫ್ (30) ಕೌಟುಂಬಿಕ ಕಲಹದಿಂದ ಬೇಸತ್ತು ನಾಪತ್ತೆಯಾಗಿದ್ದಾರೆ. 5.5 ಅಡಿ ಎತ್ತರ, ಗೋದಿ ಬಣ್ಣ, ದುಂಡುಮುಖ, ಸಾಧಾರಣ ಮೈಕಟ್ಟು ಹೊಂದಿದ್ದಾರೆ. ಇವರು ಉರ್ದು, ಹಿಂದಿ, ಕನ್ನಡ ಮತ್ತು ಇಂಗ್ಲಿಷ್ ಮಾತನಾಡುತ್ತಾರೆ. ಇವರ ಪತ್ತೆಯಾದಲ್ಲಿ ದೂ. 2418309 ಸಂಪರ್ಕಿಸಬಹುದು. ಮತ್ತೊಂದು ಪ್ರಕರಣದಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ಸಾಲ ಮಾಡಿ ತೀರಿಸಲಾಗದೆ ಎನ್.ಆರ್. ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕಲ್ಯಾಣ್ಕುಮಾರ್ (38) ನಾಪತ್ತೆಯಾಗಿದ್ದಾರೆ. 5.4 ಅಡಿ ಎತ್ತರ, ಸಾಧಾರಣ ಮೈ ಕಟ್ಟು, ಗೋದಿ ಮೈ ಬಣ್ಣ, ಕೋಲು ಮುಖ ಹೊಂದಿದ್ದಾರೆ. ಇವರು ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಮಾತನಾಡಬಲ್ಲರು. ಇವರ ಪತ್ತೆಯಾದಲ್ಲಿ ದೂ. 2418112 ಸಂಪರ್ಕಿಸಬಹುದು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.